ADVERTISEMENT

ಜನವರಿ 22ರ ವಿಶೇಷ ಅಧಿವೇಶನದ ನಂತರ ಬಜೆಟ್ ತಯಾರಿ ಆರಂಭ: ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 13:02 IST
Last Updated 20 ಜನವರಿ 2026, 13:02 IST
<div class="paragraphs"><p>ಸಿದ್ದರಾಮಯ್ಯ</p></div>

ಸಿದ್ದರಾಮಯ್ಯ

   

ಬೆಂಗಳೂರು: ಜನವರಿ 22 ರಿಂದ ಜನವರಿ 31 ರವರೆಗೆ ಜಂಟಿ ಅಧಿವೇಶನ ನಡೆಯಲಿದ್ದು, ಮನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಮತ್ತು ನರೇಗಾಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದರು.

ADVERTISEMENT

ಮುಖ್ಯಮಂತ್ರಿಗಳ ನವದೆಹಲಿಗೆ ಭೇಟಿ ನೀಡುವ ಬಗ್ಗೆ ಪ್ರತಿಕ್ರಿಯೆ ನೀಡಿ, ವರಿಷ್ಠರು ಕರೆ ನೀಡಿದರೆ ನವದೆಹಲಿಗೆ ತೆರಳುವುದಾಗಿ ತಿಳಿಸಿದರು.

ಡಿಜಿಪಿ ರಾಮಚಂದ್ರರಾವ್ ಅವರ ಅನುಚಿತ ವರ್ತನೆ ವಿರುದ್ಧ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅವರ ವಿರುದ್ಧ ಶಿಸ್ತಿನ ಕ್ರಮ ಜರುಗಿಸಿ, ಅಮಾನತ್ತುಗೊಳಿಸಲಾಗಿದೆ ಎಂದರು.

ಸಚಿವ ಆರ್.ಬಿ.ತಿಮ್ಮಾಪುರ ವಿರುದ್ದ ಕೇಳಿ ಬಂದಿರುವ ಆರೋಪ ಕುರಿತು, ನನಗೆ ಮಾಹಿತಿ ಇಲ್ಲ. ನೀವು ಈಗ ಕೇಳಿದಾಗಲೇ ಗೊತ್ತಾಗಿದ್ದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.