ಬೆಳಗಾವಿ: ಕಾಗವಾಡ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಬಿಜೆಪಿಯಭರಮಗೌಡ (ರಾಜು) ಕಾಗೆ ಸೋಮವಾರ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ಬರುವ ಉಪಚುನಾವಣೆಯಲ್ಲಿಕಾಗವಾಡ ಅಥವಾ ಅಥಣಿ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡುವಂತೆ ಸಿದ್ಧರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಭಾನುವಾರ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರುವುದಾಗಿ ಪ್ರಕಟಿಸಿದ್ದರು.
ಬಿಜೆಪಿಯಲ್ಲಿ ಟಿಕೆಟ್ ದೊರೆಯುವುದಿಲ್ಲ ಎನ್ನುವುದು ಖಚಿತವಾಗುತ್ತಿದ್ದಂತೆಯೇ ಭರಮಗೌಡ (ರಾಜು) ಕಾಗೆ ಕಾಂಗ್ರೆಸ್ ಕದ ತಟ್ಟಿದ್ದಾರೆ.
2018ರ ಚುನಾವಣೆಯಲ್ಲಿ ರಾಜು ಕಾಗೆ ಸೋಲು ಅನುಭವಿಸಿದ್ದರು. ಅವರಿಗೆ ಇತ್ತೀಚಿಗೆ‘ಕಾಡಾ’ ಅಧ್ಯಕ್ಷ ಸ್ಥಾನವನ್ನು ನೀಡಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.