ವಿಧಾನಸೌಧ
ಬೆಂಗಳೂರು: ಗ್ರೇಟರ್ ಬೆಂಗಳೂರು, ದೇವದಾಸಿ ಪದ್ಧತಿ ನಿರ್ಮೂಲನೆ, ಸೌಹಾರ್ದ ಸಹಕಾರಿ ತಿದ್ದುಪಡಿ ಮಸೂದೆ ಸೇರಿ ವಿಧಾನಮಂಡಲದ ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಿರುವ 17 ಮಸೂದೆಗಳಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
‘ರೋಹಿತ್ ವೇಮುಲ ಮಸೂದೆ’ ಬಗ್ಗೆ ಇನ್ನಷ್ಟು ಚರ್ಚೆ ನಡೆಯಬೇಕಾಗಿರುವುದರಿಂದ ಪ್ರಸ್ತಾವನೆಯನ್ನು ಮುಂದೂಡಲಾಗಿದೆ.
ಅಲ್ಲದೇ, ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯ ರಚನೆ, ಆಯುಕ್ತರ ನೇಮಕಾತಿ ಹಾಗೂ ಅಧಿಕಾರ ಮತ್ತು ಕರ್ತವ್ಯಗಳಿಗೆ ಸಂಬಂಧಿಸಿದಂತೆ ಶಾಸನ ಬದ್ಧ ಅವಕಾಶ ನೀಡಲು ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ ಕಾಯ್ದೆ 1987 ಮತ್ತು ಮೈಸೂರು ಅಭಿವೃದ್ಧಿ ಪ್ರಾಧಿಕಾರ ಕಾಯ್ದೆ 2024 ಕ್ಕೆ ತಿದ್ದುಪಡಿ ಮಾಡಲಾಗಿದೆ. ಆಯುಕ್ತಾಲಯ ರಚನೆಯಿಂದ ನಗರಾಭಿವೃದ್ಧಿ ಪ್ರಾಧಿಕಾರಗಳು ಮತ್ತು ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿಯಂತ್ರಣ ಆಯುಕ್ತಾಲಯದ ವ್ಯಾಪ್ತಿಗೆ ಒಳಪಡಲಿದೆ.
ಪ್ರಮುಖ ಮಸೂದೆಗಳು
ಕರ್ನಾಟಕ ದೇವದಾಸಿ ಪದ್ಧತಿ (ತಡೆಗಟ್ಟುವಿಕೆ, ನಿಷೇಧ, ಪರಿಹಾರ ಮತ್ತು ಪುನರ್ವಸತಿ) ಮಸೂದೆ 2025
ಕರ್ನಾಟಕ ಅಪರಾಧ ಮುಕ್ತಗೊಳಿಸುವಿಕೆ (ಉಪಬಂಧಗಳ ತಿದ್ದುಪಡಿ)ಮಸೂದೆ 2025
ನೋಂದಣಿ(ಕರ್ನಾಟಕ ತಿದ್ದುಪಡಿ)ಮಸೂದೆ, 2025
ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ (ಅನುಕೂಲತೆ ಮತ್ತು ನಿಯಂತ್ರಣಾ)(ತಿದ್ದುಪಡಿ) ಮಸೂದೆ 2025
ಕರ್ನಾಟಕ ಪುರಸಭೆಗಳ ಹಾಗೂ ಇತರೆ ಕಾನೂನುಗಳ(ತಿದ್ದುಪಡಿ) ಮಸೂದೆ 2025
ಕರ್ನಾಟಕ ಬಂದರು(ಲ್ಯಾಂಡಿಂಗ್ ಮತ್ತು ಶಿಪ್ಪಿಂಗ್ ಫೀಸ್)(ತಿದ್ದುಪಡಿ) ಮಸೂದೆ 2025
ಕರ್ನಾಟಕ ಸರ್ಕಾರಿ ವ್ಯಾಜ್ಯ ನಿರ್ವಹಣೆ (ತಿದ್ದುಪಡಿ) ಮಸೂದೆ 2025
ಕರ್ನಾಟಕ ಭೂ ಸುಧಾರಣೆಗಳು ಮತ್ತು ಇತರೆ ಕಾನೂನು(ತಿದ್ದುಪಡಿ) ಮಸೂದೆ 2025
ಕರ್ನಾಟಕ ನಗರಪಾಲಿಕೆಗಳ (ತಿದ್ದುಪಡಿ) ಮಸೂದೆ 2025
ಗ್ರೇಟರ್ ಬೆಂಗಳೂರು ಆಡಳಿತ(ತಿದ್ದುಪಡಿ) ಮಸೂದೆ 2025
ಕರ್ನಾಟಕ ಅತ್ಯವಶ್ಯಕ ಸೇವೆಗಳ ನಿರ್ವಹಣಾ (ತಿದ್ದುಪಡಿ) ಮಸೂದೆ 2025
ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ)ಮಸೂದೆ 2025
ಕರ್ನಾಟಕ ಅಂತರ್ಜಲ(ಅಭಿವೃದ್ಧಿ ಮತ್ತು ನಿರ್ವಹಣೆ, ನಿಯಂತ್ರಣ) (ತಿದ್ದುಪಡಿ) ಮಸೂದೆ–2025
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.