ಬೆಂಗಳೂರು: ಗ್ಯಾರಂಟಿಗಳನ್ನು ಜಾರಿಗೊಳಿಸಿ ಸತತ ಸಭೆಗಳ ನಂತರ ಕೊನೆಗೂ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸುವ ಮೂಲಕ 5 ಗ್ಯಾರಂಟಿಗಳ ಮಾಹಿತಿ ನೀಡಿದ್ದು ಈ ವರ್ಷವೇ ಎಲ್ಲಾ ಯೋಜನೆ ಜಾರಿ ತರುತ್ತೇವೆ ಎಂದು ತಿಳಿಸಿದ್ದಾರೆ.
ಗ್ಯಾರಂಟಿಗಳನ್ನು ಜಾರಿ ಮಾಡಿರುವ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಚುನಾವಣಾ ಪೂರ್ವದಲ್ಲಿ ನಾವು ನಾಡಿನ ಜನತೆಗೆ ನೀಡಿದ್ದ 5 ಗ್ಯಾರೆಂಟಿ ಯೋಜನೆಗಳಿಗೆ ಇಂದು ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಮೂಲಕ ‘ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ’ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೇವೆ’ ಎಂದು ಹೇಳಿದ್ದಾರೆ.
‘ಬೆಲೆ ಏರಿಕೆ, ನಿರುದ್ಯೋಗ, ಹಸಿವು, ಬಡತನಗಳಿಂದ ನೊಂದು ಬದುಕು ಸಾಗಿಸಲು ಹೆಣಗಾಡುತ್ತಿರುವ ಜನರ ಬದುಕಿಗೆ ನಮ್ಮ ಈ ಗ್ಯಾರಂಟಿ ಯೋಜನೆಗಳು ಹೊಸ ಚೈತನ್ಯ ತುಂಬಲಿದೆ ಎಂದು ಭಾವಿಸಿದ್ದೇನೆ. ಜನರ ಬೆವರ ಗಳಿಕೆಯ ಹಣ ಜನಕಲ್ಯಾಣ ಕಾರ್ಯಗಳಿಗೆ ಮಾತ್ರ ಬಳಕೆಯಾಗಲಿ, ಹಸಿವು, ಬಡತನ, ನಿರುದ್ಯೋಗಗಳ ತಾಪ ನಾಡಿನ ಜನರಿಗೆ ತಟ್ಟದಿರಲಿ ಎಂಬುದು ನಮ್ಮ ಸದುದ್ದೇಶ. ನಮ್ಮ ಈ 5 ಗ್ಯಾರಂಟಿಗಳನ್ನು ನಾಡಿನ ಜನತೆಗೆ ಅತ್ಯಂತ ಹೆಮ್ಮೆಯಿಂದ ಅರ್ಪಿಸುತ್ತಿದ್ದೇನೆ’ ಎಂದು ತಿಳಿಸಿದ್ದಾರೆ.
‘ಜನರ ಹಣವನ್ನು ಜನರಿಗೇ ವಿನಿಯೋಗಿಸುವುದು ಜನರ ಆರ್ಥಿಕ ಸ್ಥಿತಿಯನ್ನು ವೃದ್ಧಿಗೊಳ್ಳುತ್ತದೆ. ಜನತೆ ಶಕ್ತಿಯುತರಾದರೆ ರಾಜ್ಯ, ದೇಶ ಶಕ್ತಿಯುತವಾಗುತ್ತದೆ. ‘ನಾವು ನುಡಿದಂತೆ ನಡೆಯುವವರು’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.