ಬೆಂಗಳೂರು: ಗ್ಯಾರಂಟಿಗಳನ್ನು ಜಾರಿಗೊಳಿಸಿ ಸತತ ಸಭೆಗಳ ನಂತರ ಕೊನೆಗೂ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಟಿ ನಡೆಸುವ ಮೂಲಕ 5 ಗ್ಯಾರಂಟಿಗಳ ಮಾಹಿತಿ ನೀಡಿದ್ದು ಈ ವರ್ಷವೇ ಎಲ್ಲಾ ಯೋಜನೆ ಜಾರಿ ತರುತ್ತೇವೆ ಎಂದು ತಿಳಿಸಿದ್ದಾರೆ.
ಗೃಹ ಜ್ಯೋತಿ: ಪ್ರಣಾಳಿಕೆಯಲ್ಲಿ ಘೋಷಿಸಿದಂತೆ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಒದಗಿಸಲು ಸಚಿವ ಸಂಪುಟ ತೀರ್ಮಾನಿಸಿತು. ಈ ಯೋಜನೆಯಡಿ ಬಳಕೆದಾರರ ಕಳೆದ 12 ತಿಂಗಳ ವಿದ್ಯುತ್ ಬಳಕೆಯ ಸರಾಸರಿಯ ಮೇಲಿನ ಶೇ. 10 ರಷ್ಟು ಉಚಿತ ವಿದ್ಯುತ್ ಒದಗಿಸಲಾಗುವುದು. ಜುಲೈ 1 ರಿಂದ ಬಳಕೆಯಾಗುವ ವಿದ್ಯುತ್ ಗೆ ಈ ಯೋಜನೆ ಅನ್ವಯವಾಗುತ್ತದೆ. ಅಲ್ಲಿಯ ವರೆಗಿನ ವಿದ್ಯುತ್ ಬಳಕೆಗೆ ಸಂಬಂಧಿಸಿದ ಬಿಲ್ಲನ್ನು ಬಳಕೆದಾರರು ಪಾವತಿಸಬೇಕು. ಆಗಸ್ಟ್ ತಿಂಗಳಿನಿಂದ ಈ ಯೋಜನೆಯ ಫಲಾನುಭವಿಗಳು ವಿದ್ಯುತ್ ಬಿಲ್ ಕಟ್ಟಬೇಕಿಲ್ಲ ಎಂದು ಸಿದ್ದರಾಮಯ್ಯ ಅವರು ಘೋಷಿಸಿದರು.
ಇದನ್ನೂ ಓದಿ... ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೇವೆ: ಸಿದ್ದರಾಮಯ್ಯ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.