ADVERTISEMENT

ಶೇ 50ರಷ್ಟು ಸಚಿವರ ಕೈಬಿಡಿ, ಹೊಸಬರಿಗೆ ಅವಕಾಶ ನೀಡಿ: ಸಲೀಂ ಅಹ್ಮದ್‌

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2026, 13:41 IST
Last Updated 10 ಫೆಬ್ರುವರಿ 2026, 13:41 IST
ಸಲೀಂ ಅಹ್ಮದ್‌
ಸಲೀಂ ಅಹ್ಮದ್‌   

ನವದೆಹಲಿ: ಬಜೆಟ್ ಅಧಿವೇಶನದ ಬಳಿಕ ಸಚಿವ ಸಂಪುಟ ಪುನರ್ ರಚನೆಯಾಗಲಿದೆ ಎಂದು ವಿಧಾನ ಪರಿಷತ್‌ ಸದಸ್ಯ ಸಲೀಂ ಅಹ್ಮದ್‌ ವಿಶ್ವಾಸ ವ್ಯಕ್ತಪಡಿಸಿದರು. 

ಮಂಗಳವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಈ ಮೊದಲೇ ಸಚಿವ ಸಂಪುಟ ಪುನರ್ ರಚನೆಯಾಗಬೇಕಿತ್ತು. ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಸಂಪುಟದ ಶೇ 50ರಷ್ಟು ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಬೇಕು. ಅವರಿಗೆ ಪಕ್ಷ ಸಂಘಟನೆಯ ಜವಾಬ್ದಾರಿ ನೀಡಬೇಕು‘ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT