ADVERTISEMENT

ಸಚಿವ ಸ್ಥಾನ ನಿಶ್ಚಿತ: ಯಶವಂತರಾಯಗೌಡ ವಿಶ್ವಾಸ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2025, 11:34 IST
Last Updated 6 ಅಕ್ಟೋಬರ್ 2025, 11:34 IST
   

ವಿಜಯಪುರ: ‘ಮುಂದಿನ ರಾಜ್ಯ ಸಚಿವ ಸಂಪುಟ ಪುನರ್‌ ರಚನೆ ಅಥವಾ ವಿಸ್ತರಣೆ ವೇಳೆ ನಾನು ಸಚಿವನಾಗುವುದು ನಿಶ್ಚಿತ’ ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದರು.

‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಜ್ಯ ಉಸ್ತುವಾರಿ ಸುರ್ಜೆವಾಲಾ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಸರ್ಕಾರ ರಚನೆ ವೇಳೆ ವಿಜಯಪುರ ಜಿಲ್ಲೆಗೆ ಸಂಬಂಧಿಸಿದಂತೆ ಎಂ.ಬಿ.ಪಾಟೀಲ, ಶಿವಾನಂದ ಪಾಟೀಲ ಮತ್ತು ನಾನು ಸೇರಿದಂತೆ ಮೂವರಿಗೆ ಸಮಾನಾಂತರ ಅಧಿಕಾರ ಹಂಚಿಕೆ ಮಾಡುತ್ತೇವೆ ಎಂದು ಭರವಸೆ ನೀಡಿದ್ದರು. ಅವರ ಮಾತಿಗೆ ಮೂವರು ಒಪ್ಪಿದ್ದೆವು. ಇದೀಗ ಕೊಟ್ಟ ಮಾತಿನಂತೆ ವರಿಷ್ಠರು ನಡೆದುಕೊಳ್ಳುವ ವಿಶ್ವಾಸ ಇದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT