ಬೆಂಗಳೂರು: ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಪದಾಧಿಕಾರಿಗಳ ಸ್ಥಾನಗಳಿಗೆ ಚುನಾವಣೆ ನಡೆಸಲು ಅನುಮತಿ ನೀಡಲಾಗಿದೆ. ಆದರೆ, ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಡಿಸೆಂಬರ್ ವರೆಗೆ ಚುನಾವಣೆ ನಡೆಸದಿರಲು ನಿರ್ಧರಿಸಲಾಗಿದೆ.
ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು.
ಸಹಕಾರ ಇಲಾಖೆ ವ್ಯಾಪ್ತಿಗೆ ಬರುವ ಸಹಕಾರ ಸಂಘಗಳು, ಸೊಸೈಟಿಗಳು, ಎಪಿಎಂಸಿಗಳಲ್ಲಿ ಅವಧಿ ಮುಗಿದ ನಿರ್ದೇಶಕ ಮಂಡಳಿಗೆ ಮಾತ್ರ ಚುನಾವಣೆ ನಡೆಸಲಾಗುವುದು. ಆದರೆ, ಜಿಲ್ಲಾಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಡಿಸೆಂಬರ್ ವರೆಗೆ ಚುನಾವಣೆ ನಡೆಸದಿರಲು ನಿರ್ಧರಿಸಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.