ಸಿದ್ದರಾಮಯ್ಯ
ಬೆಂಗಳೂರು: ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಶಾಸಕರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಭೆ ನಡೆಸಿದರು.
ಶಾಸಕರ ಸಮಸ್ಯೆಗಳನ್ನು ಆಲಿಸಿದ ಮುಖ್ಯಮಂತ್ರಿ, ಅವುಗಳನ್ನು ಪರಿಹರಿಸುವ ಮತ್ತು ಬೇಡಿಕೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ದಾರೆ.
ರಾಜ್ಯದ ಆರ್ಥಿಕ ಪರಿಸ್ಥಿತಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಸಭೆಯಲ್ಲಿ ವಿವರಿಸಿದ ಅವರು, ಸರ್ಕಾರದ ಯೋಜನೆಗಳನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ಶಾಸಕರು ಮಾಡಬೇಕು ಎಂದು ಕಿವಿಮಾತು ಹೇಳಿದ್ದಾರೆ.
ಉಸ್ತುವಾರಿ ಸಚಿವರು ತಮ್ಮ ಜಿಲ್ಲೆಯ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು. ಕ್ಷೇತ್ರಗಳ ಅಭಿವೃದ್ಧಿಗೆ ಈಗಾಗಲೇ ವಿಶೇಷ ಅನುದಾನ ನೀಡಲಾಗಿದೆ. ಈ ಅನುದಾನ ಸದ್ಬಳಕೆಯಾಗುವಂತೆ ನೋಡಿಕೊಳ್ಳಬೇಕು. ರಸಗೊಬ್ಬರ ವಿಚಾರದಲ್ಲಿ ರೈತರಲ್ಲಿ ಯಾವುದೇ ಗೊಂದಲ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.