ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿದ್ದ ಕೆಲವು ಸಚಿವರ ಖಾತೆಗಳನ್ನು ಬದಲಾಯಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಇದ್ದ ಗೃಹ ಖಾತೆಯನ್ನು ಆರಗ ಜ್ಞಾನೇಂದ್ರ ಅವರಿಗೆ ನೀಡಲಾಗಿದೆ. ಗೋವಿಂದ ಕಾರಜೋಳ ಅವರಿಗೆ ಲೋಕೋಪಯೋಗಿ ಬದಲಿಗೆ ಜಲ ಸಂಪನ್ಮೂಲ ಖಾತೆ ನೀಡಲಾಗಿದೆ. ಲೋಕೋಪಯೋಗಿ ಖಾತೆಯನ್ನು ಸಿ.ಸಿ. ಪಾಟೀಲ ಅವರಿಗೆ ನೀಡಲಾಗಿದೆ.
ಶಶಿಕಲಾ ಜೊಲ್ಲೆ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಬದಲಿಗೆ ಮುಜರಾಯಿ, ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ. ಮುಜರಾಯಿ ಸಚಿವರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಸಮಾಜ ಕಲ್ಯಾಣ ಖಾತೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.