
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೆಹಲಿ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.
ನವದೆಹಲಿ: ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇಂದು (ಶುಕ್ರವಾರ) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಇದಕ್ಕೂ ಮುನ್ನ ಪ್ರತಿಕ್ರಿಯಿಸಿದ ಸಿಎಂ, 'ನವೆಂಬರ್ 20ಕ್ಕೆ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬಲಿದೆ. 140 ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಿದ್ದು, ಎಲ್ಲರೂ ಸಮರ್ಥರಿದ್ದಾರೆ' ಎಂದು ತಿಳಿಸಿದ್ದಾರೆ.
'ಈ ಕುರಿತು ಮಾತನಾಡಲು ಹೋಗ್ತಿದ್ದಿನಿ. ಅವರು ಎಷ್ಟು ಬದಲಾವಣೆ ಮಾಡಲು ಅಂತಾರೆ ಅಷ್ಟು ಮಾಡ್ತೀನಿ' ಎಂದು ಹೇಳಿದ್ದಾರೆ.
'ಖರ್ಗೆ ಅವರನ್ನು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿಯಾಗಿದ್ದು ಗೊತ್ತಿದೆ. ಏನು ಮಾತನಾಡಿದ್ದಾರೆ ಎಂದು ಗೊತ್ತಿಲ್ಲ' ಎಂದಷ್ಟೇ ಪ್ರತಿಕ್ರಿಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.