ರಾಜ್ಯದಲ್ಲಿ ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ಪ್ರಬಲ ಜಾತಿಗಳಾದ ಒಕ್ಕಲಿಗರು ಮತ್ತು ಲಿಂಗಾಯತರು ಸರ್ಕಾರದಲ್ಲಿ ತಮಗೆ ಹೆಚ್ಚಿನ ಪಾಲು ಪಡೆಯುತ್ತಾ ಬಂದಿದ್ದಾರೆ. ಈ ನಿಟ್ಟಿನಲ್ಲಿ, ಈ ಜಾತಿವಾರು ಸಮೀಕ್ಷೆಯ ನಂತರ ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಮುಸ್ಲಿಮರು ಹಾಗೂ ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎನ್ನುವುದು ಮತ್ತೊಮ್ಮೆ ದೃಢಪಟ್ಟರೆ ತಮ್ಮ ಅಸ್ತಿತ್ವಕ್ಕೆ ಧಕ್ಕೆ ಬರಬಹುದೇನೋ ಎಂಬ ಆತಂಕದಿಂದ ಬಿಜೆಪಿ ಮತ್ತು ಜೆಡಿಎಸ್‌ನ ಈ ಪ್ರಬಲ ಸಮುದಾಯದ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇನ್ನೊಂದೆಡೆ, ನವೆಂಬರ್ ನಂತರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಆಗಲಿದೆ ಎಂಬ ಚರ್ಚೆ ಕಾಂಗ್ರೆಸ್ ಪಡಸಾಲೆಯಲ್ಲಿ ಕೇಳಿಬರುತ್ತಿದೆ. ಈ ಕುರಿತು ಚರ್ಚೆ ಮತ್ತು ವಿಶ್ಲೇಷಣೆ ಈ ವಿಡಿಯೊದಲ್ಲಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.