
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ರಾಜ್ಯ ಸರ್ಕಾರದ ಸಾಮಾಜಿಕ–ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗಿಯಾಗದೇ ಇರುವವರು ಮತ್ತು ಈವರೆಗೆ ಮಾಹಿತಿ ನೀಡಲು ಸಾಧ್ಯವಾಗದೇ ಇರುವವರು ನವೆಂಬರ್ 10ರವೆಗೆ ಆನ್‌ಲೈನ್ ಮೂಲಕ ವಿವರಗಳನ್ನು ನಮೂದಿಸಬಹುದಾಗಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಮೀಕ್ಷೆಯ ಮನೆ–ಮನೆ ಭೇಟಿ ಹಂತವು ಶುಕ್ರವಾರಕ್ಕೆ (ಅಕ್ಟೋಬರ್ 31) ಕೊನೆಗೊಳ್ಳಲಿದೆ. ಆದರೆ, ಆನ್‌ಲೈನ್ ಮೂಲಕ ಜನರು ಸ್ವಯಂ ಮಾಹಿತಿ ದಾಖಲಿಸುವ ದಿನಾಂಕವನ್ನು ನವೆಂಬರ್ 10ರವರೆಗೆ ವಿಸ್ತರಿಸಿ, ಆಯೋಗವು ಗುರುವಾರ ಆದೇಶಿಸಿದೆ.
https://kscbcselfdeclaration.karnataka.gov.in ಲಿಂಕ್ ಮೂಲಕ ಸಮೀಕ್ಷೆಯಲ್ಲಿ ಭಾಗಿಯಾಗಬಹುದಾಗಿದೆ. ಜನರು ತಮ್ಮ ಮನೆಗೆ ನೀಡಲಾಗಿರುವ ಯುಎಚ್‌ಐಡಿ ಅಥವಾ ವಿದ್ಯುತ್ ಮೀಟರ್‌ನ ಆರ್‌ಆರ್ ಸಂಖ್ಯೆಯನ್ನು ಬಳಸಿಕೊಂಡು ಈ ಪೋರ್ಟಲ್‌ನಲ್ಲಿ ಮಾಹಿತಿ ತುಂಬಬಹುದಾಗಿದೆ.
ಹೆಚ್ಚಿನ ಮಾಹಿತಿಗೆ 80507 70004 ಸಂಖ್ಯೆಯ ಸಹಾಯವಾಣಿಗೆ ಕರೆ ಮಾಡಬಹುದು ಎಂದು ಆಯೋಗದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.