ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ
ಪ್ರಾತಿನಿಧಿಕ ಚಿತ್ರ
ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಶುಕ್ರವಾರದವರೆಗೆ ಶೇ 63.03 ರಷ್ಟು ಪ್ರಗತಿಯಾಗಿದೆ.
1.43 ಕೋಟಿ ಮನೆಗಳ ಸಮೀಕ್ಷೆ ನಡೆಸಬೇಕಿದ್ದು, 81.27 ಲಕ್ಷ ಮನೆಗಳ ಸಮೀಕ್ಷೆ ಗುರುವಾರ ಸಂಜೆಗೆ ಮುಗಿದಿತ್ತು. ಶುಕ್ರವಾರ 9.35 ಲಕ್ಷ ಮನೆಗಳ ಸಮೀಕ್ಷೆಯಾಗಿದೆ. 3.42 ಲಕ್ಷ ಜನರ ವಿವರ ಸಂಗ್ರಹಿಸಲಾಗಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಶನಿವಾರ(ಅ.4)ದಿಂದ ಸಮೀಕ್ಷೆ ಆರಂಭವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.