ADVERTISEMENT

Central Tax Allocation | ತೆರಿಗೆ ಪಾಲು: ರಾಜ್ಯಕ್ಕೆ ₹46,933 ಕೋಟಿ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2025, 14:18 IST
Last Updated 5 ಆಗಸ್ಟ್ 2025, 14:18 IST
ತೆರಿಗೆ
ತೆರಿಗೆ   

ನವದೆಹಲಿ: 2024-25ನೇ ಹಣಕಾಸು ವರ್ಷದಲ್ಲಿ ಕೇಂದ್ರ ತೆರಿಗೆಗಳು ಮತ್ತು ಸುಂಕಗಳಲ್ಲಿ ಕರ್ನಾಟಕ ರಾಜ್ಯಕ್ಕೆ ₹46,933 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್‌ ಚೌಧರಿ ತಿಳಿಸಿದ್ದಾರೆ. 

ರಾಜ್ಯಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಈರಣ್ಣ ಕಡಾಡಿ ಕೇಳಿರುವ ಪ್ರಶ್ನೆಗೆ ಲಖಿತ ಉತ್ತರ ನೀಡಿರುವ ಸಚಿವರು, 2022-23ರಲ್ಲಿ ₹34,596 ಕೋಟಿ ಹಾಗೂ 2023-24ರಲ್ಲಿ ₹41,193 ಕೋಟಿ ಬಿಡುಗಡೆಗೊಳಿಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ. 

ಸ್ಥಳೀಯ ಸಂಸ್ಥೆಗಳು, ವಿಪತ್ತು ನಿರ್ವಹಣೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಕಳೆದ ಮೂರು ವರ್ಷಗಳಲ್ಲಿ ಕ್ರಮವಾಗಿ ₹5426 ಕೋಟಿ, ₹3532 ಕೋಟಿ ಹಾಗೂ ₹6826 ಕೋಟಿ ಬಿಡುಗಡೆ ಮಾಡಲಾಗಿತ್ತು ಎಂದು ಅವರು ವಿವರ ನೀಡಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.