ADVERTISEMENT

ಸಿಇಟಿ ಪರೀಕ್ಷೆ: ಶೇ 95ಕ್ಕೂ ಅಧಿಕ ಅಭ್ಯರ್ಥಿಗಳು ಹಾಜರು

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2021, 19:31 IST
Last Updated 29 ಆಗಸ್ಟ್ 2021, 19:31 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವೃತ್ತಿಪರ ಕೋರ್ಸ್‌ಗ‌ಳ ಪ್ರವೇಶಕ್ಕೆ ರಾಜ್ಯದಾದ್ಯಂತ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಭಾನುವಾರ (ಆ. 29) ಕೂಡಾ ಸುಗಮವಾಗಿ ನಡೆದಿದೆ.

ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 2,01,834 ಅಭ್ಯರ್ಥಿಗಳಲ್ಲಿ, 1,93,588 (ಶೇ 95.91) ಅಭ್ಯರ್ಥಿಗಳು ಭೌತವಿಜ್ಞಾನ ಮತ್ತು 1,93,522 (ಶೇ 95.88) ಅಭ್ಯರ್ಥಿಗಳು ರಸಾಯನ ವಿಜ್ಞಾನ ವಿಷಯಕ್ಕೆ ಹಾಜರಾಗಿದ್ದಾರೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾಹಿತಿ ನೀಡಿದ್ದಾರೆ.

‘ಕೋವಿಡ್ ಎಸ್‌ಒಪಿ ಪಾಲಿಸಿ ಎಲ್ಲ 530 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿದೆ. ಕೋವಿಡ್ ಪಾಸಿಟಿವ್ ಇದ್ದ 12 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ’ ಎಂದು ಅವರು ಹೇಳಿದ್ದಾರೆ.

ADVERTISEMENT

‘ಹೊರನಾಡು ಮತ್ತು ಗಡಿನಾಡು ಭಾಗದ ಕನ್ನಡಿಗ ಅಭ್ಯರ್ಥಿಗಳಿಗೆ ಬೀದರ್, ಬೆಳಗಾವಿ, ಬಳ್ಳಾರಿ, ವಿಜಯಪುರ, ಮಂಗಳೂರು ಮತ್ತು ಬೆಂಗಳೂರು ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ಸೋಮವಾರ (ಆ. 30) ನಡೆಯಲಿದೆ. 1,682 ಅಭ್ಯರ್ಥಿಗಳು ಈ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದಾರೆ’ ಎಂದೂ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.