ADVERTISEMENT

ನಾಲ್ಕು ರಾಜ್ಯಗಳ ಜನರಿಗೆ ಪ್ರವೇಶ ಇಲ್ಲ, ಭಾನುವಾರ ಎಲ್ಲೆಡೆ ಕಡ್ಡಾಯ ಲಾಕ್‌ಡೌನ್

​ಪ್ರಜಾವಾಣಿ ವಾರ್ತೆ
Published 18 ಮೇ 2020, 17:32 IST
Last Updated 18 ಮೇ 2020, 17:32 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ಕೋವಿಡ್‌–19 ಸೋಂಕು ಹರಡುವಿಕೆ ನಿಯಂತ್ರಿಸಲು ಗುಜರಾತ್‌, ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡಿನಿಂದ ಬರುವ ಜನರಿಗೆ ಮೇ 31ರ ವರೆಗೆ ಅವಕಾಶವಿರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ.

ನಾಲ್ಕನೇ ಅವಧಿಯ ಲಾಕ್‌ಡೌನ್‌ ಜಾರಿಯಲ್ಲಿದ್ದು ಈ ಹಂತದಲ್ಲಿ ಹೊರ ರಾಜ್ಯಗಳ ಜನರಿಗೆ ತೀರಾ ಅನಿವಾರ್ಯವಾದರೆ ಮಾತ್ರ ರಾಜ್ಯಕ್ಕೆ ಬರಲು ಅವಕಾಶ ನೀಡಲಾಗುವುದು. ಅಂತಹವರಿಗೆ ಹಂತ ಹಂತವಾಗಿ ಬಸ್‌ ವ್ಯವಸ್ಥೆ ಮಾಡಲಾಗುವುದು. ಹಾಗೆ ಬಂದವರನ್ನು ತಪಾಸಣೆ ಮಾಡಿ ಕಡ್ಡಾಯವಾಗಿ ಸಾಮೂಹಿಕ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಹೊರ ರಾಜ್ಯ ಮತ್ತು ಹೊರ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆದುಕೊಂಡು ಬಂದಾಗ ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು

ADVERTISEMENT

ರಾಜ್ಯದ ಒಳಗೆ ರೈಲು ಸಂಚಾರಕ್ಕೆ ಅವಕಾಶ ನೀಡಲಾಗುವುದು. ಹೊರ ರಾಜ್ಯಗಳಿಗೆ ರೈಲಿನ ಓಡಾಟಕ್ಕೆ ಅವಕಾಶವಿಲ್ಲ ಎಂದೂ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.‌

ಪ್ರತಿ ಭಾನುವಾರ ರಾಜ್ಯದ ಎಲ್ಲ ಕಡೆಗಳಲ್ಲೂ ಸಂಪೂರ್ಣ ಲಾಕ್‌ಡೌನ್‌ ಇರುತ್ತದೆ. ಯಾವುದೇ ಅಂಗಡಿ ಮುಂಗಟ್ಟು ತೆರೆಯುವಂತಿಲ್ಲ. ಆ ದಿನ ಎಲ್ಲರಿಗೂ ವಿಶ್ರಾಂತಿ ಎಂದು ಭಾವಿಸಬೇಕು ಎಂದೂ ಯಡಿಯೂರಪ್ಪ ಹೇಳಿದ್ದಾರೆ.

ಹೊರ ರಾಜ್ಯ ಮತ್ತು ಹೊರ ದೇಶಗಳಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆದುಕೊಂಡು ಬಂದಾಗ ಕಡ್ಡಾಯವಾಗಿ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು ಎಂದು ಹೇಳಿದ್ದಾರೆ.

ಮದುವೆಗಳಿಗೆ ಅವಕಾಶ:
ಲಾಕ್‌ಡೌನ್‌ನಿಂದ ಸಾಕಷ್ಟು ವಿವಾಹಗಳು ಮುಂದೂಡಿಕೆ ಆಗಿರುವುದರಿಂದ ಷರತ್ತುಬದ್ಧ ಅನುಮತಿ ನೀಡಲು ಸರ್ಕಾರ ತೀರ್ಮಾನಿಸಿದೆ. ಲಾಕ್‌ಡೌನ್‌ ನಿಯಮಾವಳಿಗಳನ್ನು ಪಾಲಿಸಿ ಮದುವೆ ನಡೆಸಬಹುದು. 50 ಜನ ಮಾತ್ರ ಪಾಲ್ಗೊಳ್ಳಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.