LIVE– ಬಿಎಸ್‌ವೈ ರಾಜೀನಾಮೆ | ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್
ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಚರ್ಚೆಯನ್ನು ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ಅಧಿಕೃತಗೊಳಿಸಿದೆ. ಸಿಎಂ ಸ್ಥಾನಕ್ಕೆ ಬಿಎಸ್‌ವೈ ರಾಜೀನಾಮೆ ಘೋಷಣೆಯೊಂದಿಗೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆ ಮತ್ತೆ ಚುರುಕುಗೊಂಡಿದೆ. ರಾಜ್ಯ ರಾಜಕೀಯದ ಇಂದಿನ ಬೆಳವಣಿಗೆಗಳ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಲಭ್ಯ.
ಪ್ರಜಾವಾಣಿ ವಾರ್ತೆ
Published 26 ಜುಲೈ 2021, 13:20 IST
Last Updated 26 ಜುಲೈ 2021, 13:20 IST
ಬಿಎಸ್‌ವೈ ರಾಜೀನಾಮೆ ಹಿಂದೆ ನಳಿನ್ ಮತ್ತು ಸಿಟಿ ರವಿ ಕೈವಾಡವಿದೆ: ಕಾಂಗ್ರೆಸ್ ಆರೋಪ
ನೂತನ ಮುಖ್ಯಮಂತ್ರಿ ಆಯ್ಕೆ: ವೀಕ್ಷಕರಾಗಿ ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್
ರಾಜ್ಯದ ಮುಂದಿನ ಮುಖ್ಯಮಂತ್ರಿ ಆಯ್ಕೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಇಬ್ಬರು ವೀಕ್ಷಕರನ್ನು ರಾಜ್ಯಕ್ಕೆ ಕಳುಹಿಸಲು ನಿರ್ಧರಿಸಿದೆ.
ಕೇಂದ್ರದ ಮಾನವ ಸಂಪನ್ಮೂಲ ಖಾತೆ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ವೀಕ್ಷಕರನ್ನಾಗಿ ನೇಮಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ದೆಹಲಿ ನಿರಂಕುಶಾಧಿಕಾರಕ್ಕೆ ಯಡಿಯೂರಪ್ಪ ತಲೆದಂಡ: ಕಾಂಗ್ರೆಸ್
ಭ್ರಷ್ಟಾಚಾರ, ವಯಸ್ಸಿನ ಕಾರಣಕ್ಕೆ ಯಡಿಯೂರಪ್ಪ ತೆಗೆದಿದ್ದಾರೆ: ಸಿದ್ದರಾಮಯ್ಯ
ಹೆಜ್ಜೆ ಹೆಜ್ಜೆಗೂ ಅಗ್ನಿಪರೀಕ್ಷೆ: ಭಾವುಕರಾಗಿ ಕಣ್ಣೀರು ಹಾಕಿದ ಯಡಿಯೂರಪ್ಪ
‘ಎರಡು ವರ್ಷವೂ ಹೆಜ್ಜೆ ಹೆಜ್ಜೆಗೂ ಅಗ್ನಿಪರೀಕ್ಷೆಗಳು ಎದುರಾಯಿತು. ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡರೂ ಸಂಪುಟ ವಿಸ್ತರಣೆಗೆ ವರಿಷ್ಠರು ಅವಕಾಶ ನೀಡಲಿಲ್ಲ. ಪ್ರವಾಹ ಬಂದಿತ್ತು ಒಬ್ಬನೇ ಹುಚ್ಚನಂತೆ ರಾಜ್ಯವಿಡೀ ತಿರುಗಾಡಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾವುಕರಾಗಿ ಕಣ್ಣೀರು ಹಾಕಿದರು.
ADVERTISEMENT
ಧರ್ಮೇಂದ್ರ ಪ್ರಧಾನ್, ಅರುಣ್ ಸಿಂಗ್ ವೀಕ್ಷಕರಾಗಿ ಬರುವ ಸಾಧ್ಯತೆ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರು ವೀಕ್ಷಕರಾಗಿ ರಾಜ್ಯಕ್ಕೆ ಬರುವ ಸಾಧ್ಯತೆ ಇದೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿ
ಶಿಕಾರಿಪುರದಲ್ಲಿ ಅಘೋಷಿತ ಬಂದ್
ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ಅವರು ರಾಜೀನಾಮೆ ಸಲ್ಲಿಸಿದ ಬೆನ್ನಲ್ಲೇ ಅವರ ಕ್ಷೇತ್ರ ಶಿಕಾರಿಪುರ ಅಘೋಷಿತ ಬಂದ್ ಆಗಿದೆ. ಅಂಗಡಿ ಮುಂಗಟ್ಟುಗಳು ಮುಚ್ಚಿವೆ.
ಸಂಸದೀಯ ಮಂಡಳಿ ಸಭೆಯಲ್ಲಿ ಮುಂದಿನ ಸಿಎಂ ಕುರಿತು ತೀರ್ಮಾನ: ಅರುಣ್ ಸಿಂಗ್
ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಜ್ಯದ ಮುಂದಿನ ಮುಖ್ಯಮಂತ್ರಿ ಕುರಿತು ನಿರ್ಧಾರ ಆಗಲಿದೆ ಎಂದು ಪಕ್ಷದ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು.
'ಸಂಸದೀಯ ಮಂಡಳಿ ಸಭೆಯ ನಂತರ ಪಕ್ಷದ ವೀಕ್ಷಕರು ಬೆಂಗಳೂರಿಗೆ ತೆರಳಲಿದ್ದಾರೆ. ಶಾಸಕರು ಮತ್ತು ಮುಖಂಡರೊಂದಿಗೆ ಸಮಾಲೋಚನೆ ನಡೆಸಿ ಕೇಂದ್ರಕ್ಕೆ ವರದಿ ಸಲ್ಲಿಸಲಿದ್ದಾರೆ. ನಾನೂ ವೀಕ್ಷಕರೊಂದಿಗೆ ತೆರಳುವೆ' ಎಂದು ಅವರು ತಿಳಿಸಿದರು.
ಸಿಎಂ ಬದಲಾವಣೆಯಿಂದ ರಾಜ್ಯಕ್ಕೆ ಪ್ರಯೋಜನವಿಲ್ಲ: ಸಿದ್ದರಾಮಯ್ಯ
ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜ್ಯದ ನಾಯಕತ್ವ ಬದಲಾವಣೆ ಪ್ರಹಸನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಮೂಲಕ ತೆರೆಬಿದ್ದಿದೆ. ಇದೀಗ, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಶುರುವಾಗಿದೆ.
ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಅಶ್ವತ್ಥ ನಾರಾಯಣ್, ರೇಣುಕಾಚಾರ್ಯ, ಎಸ್ .ಆರ್ ವಿಶ್ವನಾಥ್, ಎಂಟಿಬಿ ನಾಗರಾಜ್, ಬಿ.ಸಿ ಪಾಟೀಲ, ಕಟ್ಟಾ ಸುಬ್ರಮಣ್ಯ ನಾಯ್ಡು, ನಾರಾಯಣ ಗೌಡ, ಕೆ. ಸುಧಾಕರ, ಸಿಸಿ ಪಾಟೀಲ್, ಲಕ್ಷ್ಮಣ್ ಸವದಿ, ಜೀವರಾಜ್ ಸೇರಿದಂತೆ ಹಲವು ನಾಯಕರ ಜತೆ ಬಿಎಸ್‌ವೈ ಮಾತುಕತೆ.
ರಾಜೀನಾಮೆ ಬಳಿಕ ಕಾವೇರಿ ನಿವಾಸದಲ್ಲಿ ಆಪ್ತ ಬಳಗದ ಜತೆ ಚರ್ಚಿಸುತ್ತಿರುವ ಯಡಿಯೂರಪ್ಪ
ಪಕ್ಷದ ಸಂಘಟನೆ ಬಲಪಡಿಸಲು ಕೆಲಸ ಮಾಡುತ್ತೇನೆಯೇ ಹೊರತು, ಬೇರೆ ಯಾವುದೇ ಸ್ಥಾನಮಾನವನ್ನು ಒಪ್ಪಿಕೊಳ್ಳುವುದಿಲ್ಲ. ಮುಂದೆ ಬರುವ ಮುಖ್ಯಮಂತ್ರಿಗೂ ನೆರವು ನೀಡುತ್ತೇನೆ – ಯಡಿಯೂರಪ್ಪ
ಮುಂದಿನ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ಶಿಫಾರಸು ಮಾಡುವುದಿಲ್ಲ: ಬಿಎಸ್‌ವೈ
ಸ್ವ ಇಚ್ಛೆಯಿಂದಲೇ ರಾಜೀನಾಮೆ ನೀಡಿದ್ದೇನೆ. ನನ್ನ ಮೇಲೆ ದೆಹಲಿಯಿಂದ ಯಾವುದೇ ಒತ್ತಡ ಇಲ್ಲ. ಬೇರೆಯವರಿಗೆ ಅವಕಾಶ ಸಿಗಬೇಕೆಂದು ಸ್ವಯಂ ಪ್ರೇರಿತವಾಗಿ ರಾಜೀನಾಮೆ ನೀಡಿದ್ದೇನೆ: ಯಡಿಯೂರಪ್ಪ
ಮುಂದೆ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ನಾನು ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಹೆಸರು ಹೇಳುವುದಿಲ್ಲ. ನಾನು ಯಾವುದೇ ಹೆಸರು ಶಿಫಾರಸು ಮಾಡಲ್ಲ. ರಾಜ್ಯಪಾಲರ ಹುದ್ದೆ ಬೇಡ: ಯಡಿಯೂರಪ್ಪ
ಎರಡು ತಿಂಗಳ ಹಿಂದೆಯೇ ರಾಜೀನಾಮೆ ನೀಡಲು ನಿರ್ಧರಿಸಿದ್ದೆ. ಆದರೆ ಎರಡು ವರ್ಷ ತುಂಬಿದ ದಿನ ರಾಜೀನಾಮೆ ನೀಡುವುದು ಒಳ್ಳೆಯದು ಎಂದು ಕೊಟ್ಟಿದ್ದೇನೆ. ಅದನ್ನು ಒಪ್ಪಿದ್ದಾರೆ. 4 ಬಾರಿ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ರಾಜ್ಯದ ಜನ ಅವಕಾಶ ನೀಡಿದ್ದಾರೆ. ಅದಕ್ಕೆ ಋಣಿ: ಯಡಿಯೂರಪ್ಪ
ದೇಶದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಕೃತಜ್ಞತೆಗಳು: ರಾಜಭವನದ ಮುಂಭಾಗದಲ್ಲಿ ಯಡಿಯೂರಪ್ಪ ಹೇಳಿಕೆ
ಯಡಿಯೂರಪ್ಪ ರಾಜೀನಾಮೆ ನೀಡುವುದರೊಂದಿಗೆ ತಮ್ಮದು ವಿಫಲ ಸರ್ಕಾರ, ವಿಫಲ ಆಡಳಿತ, ವಿಫಲ ನಾಯಕತ್ವ ಎನ್ನುವುದನ್ನು ಒಪ್ಪಿಕೊಂಡಂತಾಗಿದೆ: ಕಾಂಗ್ರೆಸ್ ಟೀಕೆ
ರಾಜಭವನಕ್ಕೆ ತೆರಳಿದ ಲಕ್ಷ್ಮಣ ಸವದಿ, ಮಾಧುಸ್ವಾಮಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಡಾ.ಕೆ ಸುಧಾಕರ್
ರಾಜಭವನ ಮುಂಭಾಗದಲ್ಲಿ ಬಿಗಿ ಪೊಲೀಸ್ ಭದ್ರತೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬ್ಯಾರಿಕೇಡ್ ಹಾಕಿದ ಪೊಲೀಸರು
ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ಯಡಿಯೂರಪ್ಪ
ರಾಜೀನಾಮೆ ಸಲ್ಲಿಸಲು ರಾಜಭವನಕ್ಕೆ ತೆರಳಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
ಮಧ್ಯಾಹ್ನ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವುದಾಗಿ ಸಿಎಂ ಯಡಿಯೂರಪ್ಪ ಘೋಷಣೆ