ADVERTISEMENT

ನಟ ಸಂಚಾರಿ ವಿಜಯ್ ನಿಧನಕ್ಕೆ‌ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

​ಪ್ರಜಾವಾಣಿ ವಾರ್ತೆ
Published 14 ಜೂನ್ 2021, 7:42 IST
Last Updated 14 ಜೂನ್ 2021, 7:42 IST
ಬಿ.ಎಸ್‌.ಯಡಿಯೂರಪ್ಪ
ಬಿ.ಎಸ್‌.ಯಡಿಯೂರಪ್ಪ   

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್‌ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿ ನಡೆಸಿರುವ ಅವರು, 'ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್‌ ಅವರ ಆತ್ಮಕ್ಕೆ ಶಾಂತಿ ಸಿಗಲಿ' ಎಂದು ತಿಳಿಸಿದ್ದಾರೆ.

ಜೆ.ಪಿ. ನಗರದ 7ನೇ ಹಂತದಲ್ಲಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಸಂಚಾರಿ ವಿಜಯ್ ಅವರನ್ನು ಬೆಂಗಳೂರಿನಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ADVERTISEMENT

ಮೆದುಳಿನ ಎರಡೂ ಭಾಗಕ್ಕೆ ಹೊಡೆತ ಬಿದ್ದು, ರಕ್ತ ಹೆಪ್ಪುಗಟ್ಟಿತ್ತು.ಮೆದುಳು ನಿಷ್ಕ್ರಿಯಗೊಂಡ ಪರಿಣಾಮ ಸಂಚಾರಿ ವಿಜಯ್‌ ನಿಧನರಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಇವುಗಳನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.