ಬೆಂಗಳೂರು: ಅಗತ್ಯಬಿದ್ದರೆ ಸರ್ಕಾರವು ಲಾಕ್‌ಡೌನ್ ಜಾರಿ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ಎಚ್ಚರಿಕೆ ನೀಡಿದರು.
'ಜನರು ತಮ್ಮ ಒಳಿತಾಗಿ ತಾವಾಗಿಯೇ ಎಚ್ಚೆತ್ತುಕೊಳ್ಳಬೇಕು. ಮುನ್ನೆಚ್ಚರಿಕೆ ವಹಿಸದಿದ್ದರೆ ನಾವು ಸೂಕ್ತ ಕ್ರಮಕೈಗೊಳ್ಳಬೇಕಾಗುತ್ತದೆ. ಅನಿವಾರ್ಯವಾದರೆ, ನಾವು ಲಾಕ್‌ಡೌನ್ ಜಾರಿಗೊಳಿಸಬೇಕಾಗುತ್ತದೆ' ಎಂದು ಸಿಎಂ ಬೀದರ್‌ನಲ್ಲಿ ಹೇಳಿದರು.
ಕೋವಿಡ್ ತಡೆಗೆ ರಾಜ್ಯದಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿವರಿಸಿದ್ದೇನೆ. ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಜಿಲ್ಲೆಗಳಲ್ಲಿ ರಾತ್ರಿ (ಕೊರೊನಾ) ಕರ್ಫ್ಯೂ ವಿಧಿಸಿರುವುದರ ಬಗ್ಗೆ ತಿಳಿಸಲಾಗಿದೆ ಎಂದರು.
ಜನರು ಮಾಸ್ಕ್ ಧರಿಸಬೇಕು, ಹ್ಯಾಂಡ್ ಸ್ಯಾನಿಟೈಸರ್ ಬಳಸುವುದು ಹಾಗೂ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು ಎಂದರು.
ಭಾನುವಾರ ರಾಜ್ಯದಲ್ಲಿ ಕೋವಿಡ್ ದೃಢಪಟ್ಟ ಪ್ರಕರಣಗಳ ಸಂಖ್ಯೆ 10,000 ದಾಟಿದೆ.
‘ಆರ್ಥಿಕ ಚಟುವಟಿಕೆಗೆ ಯಾವುದೇ ರೀತಿಯ ತೊಂದರೆ ಆಗದಂತೆ ನಿರ್ಬಂಧಗಳನ್ನು ಜಾರಿಗೊಳಿಸಬೇಕು ಎಂಬುದಾಗಿ ತಜ್ಞರು ಸಲಹೆ ನೀಡಿದ್ದಾರೆ. ಆದರೆ, ಗುಂಪು ಸೇರುವುದಕ್ಕೆ ಕಡಿವಾಣ ಹಾಕದಿದ್ದರೆ ಪರಿಸ್ಥಿತಿ ಹದಗೆಡುತ್ತದೆ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ’ ಎಂದು ಸಚಿವ ಡಾ.ಕೆ. ಸುಧಾಕರ್ ಭಾನುವಾರ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.