ADVERTISEMENT

79ನೇ ವಸಂತಕ್ಕೆ ಕಾಲಿಟ್ಟ ಯಡಿಯೂರಪ್ಪ: ಬೊಮ್ಮಾಯಿ ಸೇರಿ ಗಣ್ಯರಿಂದ ಶುಭ ಹಾರೈಕೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಫೆಬ್ರುವರಿ 2022, 5:21 IST
Last Updated 27 ಫೆಬ್ರುವರಿ 2022, 5:21 IST
ಬಿ. ಎಸ್. ಯಡಿಯೂರಪ್ಪ
ಬಿ. ಎಸ್. ಯಡಿಯೂರಪ್ಪ    

ಬೆಂಗಳೂರು: ‌ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು (ಭಾನುವಾರ) 79ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಹುಟ್ಟುಹಬ್ಬದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು, ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಶುಭ ಹಾರೈಸಿದ್ದಾರೆ.

‘ರೈತ ನಾಯಕ, ಮಾಜಿ ಮುಖ್ಯಮಂತ್ರಿ, ದಿಟ್ಟ ಧೀಮಂತ ನಾಯಕರು, ನನ್ನ ಮಾರ್ಗದರ್ಶಕರಾದ ಬಿ. ಎಸ್.ಯಡಿಯೂರಪ್ಪ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಹೆಚ್ಚಿನ ಆಯಸ್ಸು ಹಾಗೂ ಉತ್ತಮ ಆರೋಗ್ಯ ನೀಡಲಿ ಎಂದು ಪ್ರಾರ್ಥಿಸುತ್ತೇನೆ‌’ ಎಂದು ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ADVERTISEMENT

‘ಹಿರಿಯ ನಾಯಕರು ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯಗಳು. ಆ ಭಗವಂತ ಅವರಿಗೆ ಇನ್ನೂ ಉತ್ತಮ ಆರೋಗ್ಯ, ಚೈತನ್ಯ ಕೊಡಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್. ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ಧೀಮಂತ ನೇತಾರ, ರೈತಬಂಧು, ಜನಪರ ಹೋರಾಟ, ಜನಸೇವೆ, ಸಾಮಾಜಿಕ ನ್ಯಾಯಗಳನ್ನೇ ತಮ್ಮ ಬದುಕಿನ ಧ್ಯೇಯವಾಗಿಸಿಕೊಂಡಿರುವ ಸರಿಸಾಟಿಯಿಲ್ಲದ ಜನನಾಯಕ, ನಿಕಟಪೂರ್ವ ಮುಖ್ಯಮಂತ್ರಿ, ಪೂಜ್ಯ ತಂದೆಯವರಾದ ಯಡಿಯೂರಪ್ಪ ಅವರಿಗೆ ಜನ್ಮದಿನದ ಹೃತ್ಪೂರ್ವಕ ಶುಭಾಶಯಗಳು. ದೇವರ ಆಶೀರ್ವಾದ ತಮ್ಮೊಂದಿಗೆ, ತಮ್ಮ ಮಾರ್ಗದರ್ಶನ ನಮಗೆ ಸದಾ ಇರಲಿ’ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಟ್ವೀಟ್ ಮಾಡಿದ್ದಾರೆ.

ನಾಡಿನ ಮುತ್ಸದ್ಧಿ ನಾಯಕರು, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳು. ಭಗವಂತ ತಮಗೆ ದೀರ್ಘಾಯುಷ್ಯ, ಉತ್ತಮ ಆರೋಗ್ಯ ನೀಡಿ ಹರಸಲಿ, ಇನ್ನಷ್ಟು ಕಾಲ ರಾಜ್ಯಕ್ಕೆ ತಮ್ಮ ಮಾರ್ಗದರ್ಶನ ಸಿಗುವಂತಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮಾಡಿದ್ದಾರೆ.

‘ಮಾಜಿ ಮುಖ್ಯಮಂತ್ರಿಗಳು ಹಾಗೂ ನಮ್ಮೆಲ್ಲರ ನೆಚ್ಚಿನ ನಾಯಕ ಬಿ.ಎಸ್ ಯಡಿಯೂರಪ್ಪ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು’ ಎಂದು ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದಾರೆ.

‘ರಾಜ್ಯ ಕಂಡ ಧೀಮಂತ ರಾಜಕಾರಣಿ ರಾಜ್ಯ ಬಿಜೆಪಿಯ ಪರಮೋಚ್ಛ ನಾಯಕ, ನನ್ನ ರಾಜಕೀಯ ಗುರುಗಳು ಮಾರ್ಗದರ್ಶಕರು ರೈತ ನಾಯಕ ಬಿ.ಎಸ್ ಯಡಿಯೂರಪ್ಪ ನವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಆಯುರಾರೋಗ್ಯ ಭಾಗ್ಯ ನೀಡಿ ಇನ್ನಷ್ಟು ಜನಸೇವೆ ಮಾಡುವ ಶಕ್ತಿಯನ್ನು ಭಗವಂತ ನಿಮಗೆ ನೀಡಲಿ ಎಂದು ಹಾರೈಸುತ್ತೇನೆ’ ಎಂದು ಶಾಸಕ ಎಂ. ಪಿ. ರೇಣುಕಾಚಾರ್ಯ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.