ADVERTISEMENT

ಹೆಚ್ಚು ಉದ್ಯೋಗ ಸೃಷ್ಟಿಸುವವರಿಗೆ ಸರ್ಕಾರದಿಂದ ಪ್ರೋತ್ಸಾಹ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2021, 7:46 IST
Last Updated 11 ಅಕ್ಟೋಬರ್ 2021, 7:46 IST
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಕ್ರಮವನ್ನು ಬೊಮ್ಮಾಯಿ ಉದ್ಘಾಟಿಸಿದರು
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಕ್ರಮವನ್ನು ಬೊಮ್ಮಾಯಿ ಉದ್ಘಾಟಿಸಿದರು   

ಬೆಂಗಳೂರು: ಹೆಚ್ಚು ಉದ್ಯೋಗ ಸೃಷ್ಟಿ ಮಾಡುವವರಿಗೆ ಸರ್ಕಾರ ಪ್ರೋತ್ಸಾಹ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಆಯೋಜಿಸಿದ್ದ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಕೈಗಾರಿಕಾ ನೀತಿ ಜೊತೆ ಉದ್ಯೋಗ ನೀತಿಯನ್ನೂ ಜಾರಿಗೊಳಿಸಲಾಗುವುದು. ದೇಶದಲ್ಲಿ ಅತಿ ಹೆಚ್ಚು ನವೋದ್ಯಮಗಳು ಬೆಂಗಳೂರಿನಲ್ಲಿವೆ. ಕರ್ನಾಟಕದಲ್ಲಿ ಹೂಡಿಕೆಗೆ ಉತ್ತಮ ವಾತಾವರಣ ಇದೆ’ ಎಂದು ಅವರು ಹೇಳಿದರು.

ADVERTISEMENT

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ , ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ, ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ಗಣಿ ಮತ್ತು ಭೂವಿಜ್ಞಾನ ಖಾತೆ ಸಚಿವರಾದ ಹಾಲಪ್ಪ ಆಚಾರ್ ಸೇರಿದಂತೆ ಇತರೆ ಪ್ರಮುಖರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.