ADVERTISEMENT

ಅಮೂಲ್ಯಗೆ ನಕ್ಸಲರ ಜತೆ ಸಂಬಂಧವಿತ್ತು: ಸಿಎಂ ಬಿ.ಎಸ್. ಯಡಿಯೂರಪ್ಪ

ಪಾಕ್ ಪರ ಘೋಷಣೆ ಪ್ರಕರಣದ ಹಿಂದಿರುವ ಸಂಘಟನೆಗಳ ವಿರುದ್ಧ ಕ್ರಮ: ಸಿಎಂ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2020, 5:45 IST
Last Updated 21 ಫೆಬ್ರುವರಿ 2020, 5:45 IST
ಬಿ.ಎಸ್. ಯಡಿಯೂರಪ್ಪ (ಸಂಗ್ರಹ ಚಿತ್ರ)
ಬಿ.ಎಸ್. ಯಡಿಯೂರಪ್ಪ (ಸಂಗ್ರಹ ಚಿತ್ರ)   

ಮೈಸೂರು:ಬೆಂಗಳೂರಿನಲ್ಲಿ ನಡೆದ ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಯುವತಿಗೆ ನಕ್ಸಲರಜತೆ ಸಂಬಂಧವಿರುವುದು ಈ ಹಿಂದೆ ಸಾಬೀತಾಗಿತ್ತು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಮೈಸೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿ,ತಪ್ಪು ಮಾಡಿದವರಿಗೆ ಸೂಕ್ತ ಶಿಕ್ಷೆಯಾಗಬೇಕು. ಇದರ ಹಿಂದೆಯಿರುವ ಸಂಘಟನೆಗಳ ಮೇಲೆ ಕ್ರಮ ಜರಗಿಸಲಾಗುವುದು ಎಂದರು.

ತಪ್ಪು ಮಾಡಿರುವ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳದಿದ್ದರೆ ಇಂತಹ ಘಟನೆಗಳು ಕೊನೆಯಾಗುವುದಿಲ್ಲ. ಸಂಘಟನೆಗಳನ್ನು ಸರಿಯಾಗಿ ತನಿಖೆಗೆ ಒಳಪಡಿಸಿದರೆ ಅವಳಿಗೆ ಈ ರೀತಿ ಪ್ರೇರಣೆ ಕೊಟ್ಟಿರುವುದು ಯಾರೆಂಬುದು ಗೊತ್ತಾಗುತ್ತದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳು ಮಾಡುವಂತಹ ವ್ಯವಸ್ಥಿತ ಸಂಚು ಇದರ ಹಿಂದೆ ಇದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದರು.

‘ಅವಳ ಕೈಕಾಲು ಮುರಿಯಿರಿ, ಜಾಮೀನು ಸಿಗಬಾರದು. ನಾನು ಅವಳ ರಕ್ಷಣೆಗೆ ಹೋಗಲ್ಲ’ಎಂದು ಅವಳ ತಂದೆಯವರೇ ಹೇಳಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.