ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 78 ನೇ ವಸಂತಕ್ಕೆ ಗುರುವಾರ ಅಡಿ ಇಡಲಿದ್ದು, ಅವರ ಅಭಿಮಾನಿಗಳು ನಗರದ ಅರಮನೆ ಮೈದಾನದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಂಡಿದ್ದಾರೆ.
ಯಡಿಯೂರಪ್ಪ ಅವರ ಸಾಮಾಜಿಕ ಮತ್ತು ರಾಜಕೀಯ ಹೋರಾಟ ಜೀವನದ ಕುರಿತ ಅಭಿನಂದನಾ ಗ್ರಂಥ ಬಿಡುಗಡೆಯಾಗಲಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ,ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಪಾಲ್ಗೊಳ್ಳುವರು.
ಈ ಸಂಬಂಧ ಟ್ವೀಟ್ ಮಾಡಿರುವ ಬಿಎಸ್‌ವೈ, ‘ಹುಟ್ಟು ಹಬ್ಬದ ಸಂದರ್ಭದಲ್ಲಿ ಹಾರ, ತುರಾಯಿ ಮತ್ತು ನೆನಪಿನ ಕಾಣಿಕೆಗಳನ್ನು ತರಬಾರದು. ಜೀವನದ ಎಲ್ಲ ಘಟ್ಟಗಳಲ್ಲೂ ನಿಮ್ಮೆಲ್ಲರ ಪ್ರೀತಿಯ ಮಹಾಪೂರದಲ್ಲಿ ಮಿಂದು ಪುನೀತನಾಗಿದ್ದೇನೆ’ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.