ADVERTISEMENT

ಮನೆಗೆ ಮರಳಿದ ಎನ್.ಆರ್.ಸಂತೋಷ್: ಮಾತ್ರೆ ಅದಲು ಬದಲಾಗಿ ಆರೋಗ್ಯದಲ್ಲಿ ಏರುಪೇರು

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 7:59 IST
Last Updated 30 ನವೆಂಬರ್ 2020, 7:59 IST
ಎನ್.ಆರ್.ಸಂತೋಷ್
ಎನ್.ಆರ್.ಸಂತೋಷ್   

ಬೆಂಗಳೂರು:ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾದ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್ ಅವರು ಎಂ.ಎಸ್.ರಾಮಯ್ಯ ಆಸ್ಪತ್ರೆಯಿಂದ ಸೋಮವಾರ ಬೆಳಿಗ್ಗೆ ಮನೆಗೆ ಮರಳಿದ್ದಾರೆ.

ಡಾಲರ್ಸ್ ಕಾಲೊನಿಯಲ್ಲಿರುವ ತಮ್ಮ ಮನೆಯಲ್ಲಿ 12 ನಿದ್ರೆ ಮಾತ್ರೆ ಸೇವಿಸಿದ್ದಾರೆ ಎನ್ನಲಾಗಿದ್ದ ಸಂತೋಷ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.‌

ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದರಿಂದ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ.

ಮಾತ್ರೆ ಅದಲು ಬದಲು: ಆಸ್ಪತ್ರೆಯಿಂದ ಮನೆಗೆ ತೆರಳುವ ವೇಳೆ ಸುದ್ದಿಗಾರರ ಜೊತೆ ಮಾತನಾಡಿದ ಸಂತೋಷ್, ‘ನಾನು ಆತ್ಮಹತ್ಯೆ ಮಾಡಿಕೊಳ್ಳುವನಲ್ಲ. ಮೂರು ದಿನದ ಹಿಂದೆ ಮದುವೆಯೊಂದಕ್ಕೆ ಹೋಗಿದ್ದೆ. ಅಲ್ಲಿಯ ಊಟದಿಂದ ಆರೋಗ್ಯ ಸಮಸ್ಯೆ ಆಗಿತ್ತು. ಅದಕ್ಕೆ ಸಂಬಂಧಪಟ್ಟ ಮಾತ್ರೆ ಬದಲು ಬೇರೆ ಮಾತ್ರೆ ತೆಗೆದುಕೊಂಡಿದ್ದರಿಂದ ನನ್ನ ಆರೋಗ್ಯದಲ್ಲಿ ಏರುಪೇರು ಆಗಿತ್ತು’ ಎಂದರು.

‘ನನಗೆ ನಿದ್ರೆಯು ಬರುತ್ತಿರಲಿಲ್ಲ. ಹೀಗಾಗಿ, ಆಗಾಗ ನಿದ್ರೆ ಮಾತ್ರೆ ತೆಗೆದುಕೊಳ್ಳುತ್ತಿದ್ದೆ. ರಾಜಕೀಯದಲ್ಲಿ ಒತ್ತಡ ಇದ್ದಿದ್ದೆ. ಅಷ್ಟಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವ ವ್ಯಕ್ತಿ ನಾನಲ್ಲ’ ಎಂದೂ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.