ಸಿದ್ದರಾಮಯ್ಯ , ಮುಖ್ಯಮಂತ್ರಿ
ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬದಲಾವಣೆ ವಿಚಾರ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟಿದ್ದು. ಅವರು ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶಿಡ್ಲಘಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಬರಿ ಸುಳ್ಳುಗಳನ್ನು ಹೇಳುವುದರಲ್ಲಿ ನಿಸ್ಸೀಮರು. ನಮ್ಮ ಬಗ್ಗೆ ಅಪಪ್ರಚಾರ ನಡೆಸುತ್ತಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಕಾಂಗ್ರೆಸ್ ಬದ್ದವಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳಿಗೆ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳಿದರು. ಆದರೆ ನಾವು ಗ್ಯಾರೆಂಟಿ ಯೋಜನೆ ಜಾರಿಗೊಳಿಸುವ ಜೊತೆಗೆ ಅಭಿವೃದ್ಧಿ ಕಾಮಗಾರಿಗಳನ್ನೂ ನಡೆಸುತ್ತಿದ್ದೇವೆ ಎಂದರು.
ಇದಕ್ಕೆ ಶಿಡ್ಲಘಟ್ಟದ ಈ ಕಾರ್ಯಕ್ರಮವೇ ಸಾಕ್ಷಿ. ವಿರೋಧ ಪಕ್ಷ ಜೆಡಿಎಸ್ ಶಾಸಕರು ಇಲ್ಲಿದ್ದಾರೆ. ಅವರು ನಮಗೆ ಸಹಕಾರ ನೀಡುತ್ತಿದ್ದು ಆ ಕಾರಣದಿಂದ ಈ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಅಭಿವೃದ್ಧಿಗೆ ಚಾಲನೆ ನೀಡುತ್ತಿದ್ದೇವೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.