
ನವದೆಹಲಿ: ಮುಖ್ಯಮಂತ್ರಿ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.
ಶನಿವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ನಮ್ಮ ಪಕ್ಷದ ಯೋಜನೆಗಳನ್ನು ಬಹಿರಂಗಪಡಿಸಲು ಹೇಗೆ ಸಾಧ್ಯ? ಇದನ್ನು ಪಕ್ಷದ ಮಟ್ಟದಲ್ಲಿ ಮಾತ್ರ ಚರ್ಚೆ ಮಾಡಲಾಗುವುದು. ಸಾರ್ವಜನಿಕವಾಗಿ ಅಲ್ಲ. ಏನಾದರೂ ಮಾಹಿತಿ ನೀಡುವುದಿದ್ದರೆ, ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು ಇದ್ದಾರೆ. ಅವರು ನೀಡುತ್ತಾರೆ” ಎಂದರು.
‘ನಾನು ಪಕ್ಷದ ನಾಯಕರನ್ನು ಭೇಟಿ ಮಾಡುವ ಉದ್ದೇಶದಿಂದಲೇ ದೆಹಲಿಗೆ ಬಂದಿದ್ದೇನೆ, ನೋಡೋಣ‘ ಎಂದರು.
ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲವು ಪ್ರಮುಖ ಕಾನೂನಾತ್ಮಕ ವಿಚಾರಗಳನ್ನು ಚರ್ಚೆ ಮಾಡಬೇಕಾಗಿದ್ದು, ಹೀಗಾಗಿ ಕಾನೂನು ತಜ್ಞರು ಹಾಗೂ ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದೇನೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.