ADVERTISEMENT

ಹೈಕಮಾಂಡ್ ಹೈಕಮಾಂಡೇ.. ಸದ್ಯ ಅವರು ಏನೂ ಹೇಳಿಲ್ಲ: ಯತೀಂದ್ರ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2026, 10:01 IST
Last Updated 7 ಫೆಬ್ರುವರಿ 2026, 10:01 IST
<div class="paragraphs"><p>ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್</p></div>

ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

   

ಬೀದರ್: ಹೈಕಮಾಂಡ್ ಹೈಕಮಾಂಡೇ. ಸದ್ಯ ಹೈಕಮಾಂಡ್ ಏನೂ ಹೇಳಿಲ್ಲ. ಹಾಗಾಗಿ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಶಾಸಕ ಡಾ. ಯತೀಂದ್ರ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ಹೈಕಮಾಂಡ್ ತೀರ್ಮಾನಕ್ಕೆ‌ಎಲ್ಲರೂ ಬದ್ಧರಾಗಿರುತ್ತಾರೆ. ನಾನು ಮೊನ್ನೆ ಕೂಡಾ ಅದನ್ನೇ ಹೇಳಿರುವೆ. ಎಲ್ಲ ಪಕ್ಷಗಳಲ್ಲಿ ಮುಖ್ಯಮಂತ್ರಿ ಸ್ಥಾನದ ಅರ್ಹತೆ ಹೊಂದಿರುವವರು ಅನೇಕರು ಇರುತ್ತಾರೆ. ಹೀಗಾಗಿ ಅವರು ಕೇಳುತ್ತಿರುತ್ತಾರೆ.ಆದರೆ, ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳುತ್ತದೆ‌ ಎಂದರು.

ADVERTISEMENT

ಹೈಕಮಾಂಡ್ ಮುಖ್ಯಮಂತ್ರಿ ಬದಲಾವಣೆಯ ವಿಚಾರವಾಗಿ ಏನೂ ಹೇಳಿಲ್ಲ. ಹೀಗಾಗಿ ಸಿಎಂ ಬದಲಾವಣೆ ಆಗಲ್ಲ ಎಂದರ್ಥ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.