
ಪ್ರಜಾವಾಣಿ ವಾರ್ತೆ
ನವದೆಹಲಿ: ಕರ್ನಾಟಕ ಮುಖ್ಯಮಂತ್ರಿ–ಉಪಮುಖ್ಯಮಂತ್ರಿ ನಡುವಿನ ಬ್ರೇಕ್ ಫಾಸ್ಟ್ ಮೀಟಿಂಗ್ ಟೀಸರ್ ಅಷ್ಟೇ. ಸಿನೆಮಾ ಇನ್ನೂ ಬಾಕಿ ಇದೆ. ಕೆಲವೇ ದಿನಗಳಲ್ಲಿ ಚಿತ್ರ ಬಿಡುಗಡೆಯಾಗಲಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.
ಮಂಗಳವಾರ ಇಲ್ಲಿ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ‘ಕೆಲವೇ ದಿನಗಳಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು ಎಂಬುದು ಹೊರಬೀಳಲಿದೆ. ಇವರಿಬ್ಬರೂ ಒಬ್ಬರಿಗೊಬ್ಬರು ಬ್ರೇಕ್ ಫಾಸ್ಟ್ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ. ಒಬ್ಬರು ಕುರ್ಚಿಯನ್ನು ಕಸಿಯಲು ಪ್ರಯತ್ನಿಸುತ್ತಿದ್ದಾರೆ. ಇನ್ನೊಬ್ಬರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಈ ನಾಟಕ ನಿಲ್ಲಬೇಕು‘ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.