
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಜಾವಾಣಿ ಚಿತ್ರಗಳು
ಬೆಂಗಳೂರು: ರಾಜ್ಯದಲ್ಲಿ ಆಗುತ್ತಿರುವ ಎಲ್ಲ ಬೆಳವಣಿಗೆಗಳನ್ನು ಕಾಂಗ್ರೆಸ್ ಹೈಕಮಾಂಡ್‌ನ ಗಮನಕ್ಕೆ ಬಂದಿದೆ. ಆದಷ್ಟು ಬೇಗ ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.
ಯಾವುದೇ ಲಾಬಿಗಳು ಇಲ್ಲ. ಮಾಧ್ಯಮಗಳಲ್ಲಿ ಮಾತ್ರ ಅವೆಲ್ಲ ಇರುವುದು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಪರಿಹಾರ ಹುಡುಕಲಿದ್ದಾರೆ ಎಂದು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.
ಸ್ವಾಮೀಜಿಗಳ ಸಹಿತ ಅನೇಕರು ಡಿ.ಕೆ. ಶಿವಕುಮಾರ್ ಇಲ್ಲವೇ ಸಿದ್ದರಾಮಯ್ಯ ಪರ ಮಾತನಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ನರೇಂದ್ರ ಮೋದಿ ಜೊತೆಗೆ ನಿಂತವರು, ಬಿಜೆಪಿಗೆ ಬೆಂಬಲ ನೀಡಿದವರು ಕಾಂಗ್ರೆಸ್ ಪಕ್ಷಕ್ಕೆ ಉಪದೇಶ ನೀಡುತ್ತಿರುವುದು ಸ್ವಾಗತಾರ್ಹ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.