ADVERTISEMENT

ರೈತರು ಕಣ್ಣೀರಿಡುವಂತೆ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಉಳಿಗಾಲವಿಲ್ಲ: ವಿಜಯೇಂದ್ರ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಡಿಸೆಂಬರ್ 2025, 5:12 IST
Last Updated 8 ಡಿಸೆಂಬರ್ 2025, 5:12 IST
<div class="paragraphs"><p>ಬಿ.ವೈ.ವಿಜಯೇಂದ್ರ</p></div>

ಬಿ.ವೈ.ವಿಜಯೇಂದ್ರ

   

(ಸಂಗ್ರಹ ಚಿತ್ರ)

ಬೆಂಗಳೂರು: ಭ್ರಷ್ಟಾಚಾರ ಮತ್ತು ಅಧಿಕಾರದ ಕಿತ್ತಾಟದಲ್ಲಿ ಮುಳುಗಿರುವ ಕರ್ನಾಟಕದ ಕಾಂಗ್ರೆಸ್ ಸರ್ಕಾರ ರೈತರ ಹಿತಾಸಕ್ತಿಗಳನ್ನು ಸಂಪೂರ್ಣವಾಗಿ ಬಲಿ ಕೊಟ್ಟಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದ್ದಾರೆ.

ADVERTISEMENT

ಬೆಳೆಹಾನಿಯ ಪರಿಹಾರ ಪೂರ್ಣವಾಗಿ ತಲುಪದಿರುವ ಬಗ್ಗೆ ಪ್ರಜಾವಾಣಿಯಲ್ಲಿ ಪ್ರಕಟವಾದ ‘ರೈತರಿಗೆ ತಲುಪದ ಪೂರ್ಣ ಪರಿಹಾರ’ ಎನ್ನುವ ವರದಿಯನ್ನು ಉಲ್ಲೇಖಿಸಿ ಅವರು ಫೇಸ್‌ಬುಕ್‌ನಲ್ಲಿ ಹೀಗೆ ಬರೆದುಕೊಂಡಿದ್ದಾರೆ.

‘ಬೆಳೆಹಾನಿ ಸಮೀಕ್ಷೆ ನಡೆಸಿ, ಪ್ರತಿ ಹೆಕ್ಟೇರ್‌ಗೆ ₹ 17 ಸಾವಿರ ಪರಿಹಾರ ಘೋಷಿಸಲಾಗಿತ್ತು. ಆದರೆ ರೈತರ ಖಾತೆಗೆ ಜಮೆಯಾಗಿದ್ದು ಕೇವಲ ₹ 6,800. ಬೆಳೆಹಾನಿಯ ಪ್ರಮಾಣ ಕಡಿಮೆ ತೋರಿಸಿ, ರೈತರನ್ನು ಯಾಕೆ ವಂಚಿಸುತ್ತಿದ್ದೀರಿ? ರೈತರಿಗೆ ಪೂರ್ಣ ಪರಿಹಾರ ಯಾಕೆ ನೀಡುತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದ್ದಾರೆ.

ರೈತರು ಕಣ್ಣೀರಿಡುವಂತೆ ಮಾಡಿದ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಕಿಡಿಕಾರಿದ್ದಾರೆ.

ರೈತರಿಗೆ ದ್ರೋಹ ಎಸಗುತ್ತಿರುವ ಮುಖ್ಯಮಂತ್ರಿಗಳ ವಿರುದ್ಧ, 'ದ್ರೋಹದ ಗ್ಯಾರಂಟಿ' ಸರ್ಕಾರದ ವಿರುದ್ಧ ಸದನದ ಒಳಗೆ ಮತ್ತು ಹೊರಗೆ ಬೃಹತ್ ಹೋರಾಟ ನಡೆಸುವುದು ನಿಶ್ಚಿತ ಎಂದು ಬರೆದುಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.