ಬೆಂಗಳೂರು: ‘ಕುಂಬಳಕಾಯಿ ಕಳ್ಳ ಅಂದರೆ ರಾಜ್ಯ ಬಿಜೆಪಿ ಸಚಿವರೇಕೆ ಹೆಗಲು ಮುಟ್ಟಿ ನೋಡಿಕೊಳ್ತಿದ್ದಾರೆ. ಸಿ.ಡಿ ಶಬ್ದ ಕೇಳಿದರೆ ಸರ್ಕಾರದ ಇಡೀ ಸಂಪುಟವೇ ಏಕೆ ಬೆಚ್ಚಿ ಬೀಳುತ್ತಿದೆ’ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದೆ.
‘ಸಚಿವರು ಏಕೆ ಸುದ್ದಿ ಪ್ರಸಾರಕ್ಕೆ ಮುಂಜಾಗ್ರತೆಯಲ್ಲಿ ತಡೆ ತರುತ್ತಿದ್ದಾರೆ? ಸರ್ಕಾರದ ರಚನೆಯಿಂದ ಹಿಡಿದು ಸಂಪುಟ ವಿಸ್ತರಣೆಯವರೆಗೂ ಬೃಹತ್ ಹಗರಣ ಅಡಗಿದೆ’ ಎಂದೂ ಟೀಕಿಸಿದೆ.
‘ಆಪರೇಷನ್ ಕಮಲ’ ಎನ್ನುವುದು ಬಿಜೆಪಿಯ ರಾಜಕೀಯ ವ್ಯಭಿಚಾರ. ಈ ಸರ್ಕಾರ ಮೇಲ್ನೋಟಕ್ಕೆ ಕಾಣುವಷ್ಟು ಸುಲಭದಲ್ಲಿ ರಚನೆಯಾಗಿದ್ದಲ್ಲ. ಭೂಗತಲೋಕ, ಬೆದರಿಕೆ, ಹನಿ ಟ್ರಾಪ್, ಬ್ಲಾಕ್ ಮೇಲ್, ಸಾವಿರಾರು ಕೋಟಿ ಹಣ, ಹೆಣ್ಣು, ಹೆಂಡ ಎಲ್ಲವನ್ನೂ ಬಿಜೆಪಿ ಉಪಯೋಗಿಸಿದ್ದು ದೃಢವಾಗುತ್ತಿದೆ. ಅಧಿಕಾರಕ್ಕಾಗಿ ಬಿಜೆಪಿ ಯಾವ ನೀಚ ಮಟ್ಟಕ್ಕೂ ಇಳಿಯಬಲ್ಲದು ಎಂದೂ ಕಾಂಗ್ರೆಸ್ ಟೀಕಿಸಿದೆ.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.