ADVERTISEMENT

ಸಿಎಂ ಕಚೇರಿ ಎದುರು ಪ್ರತಿಭಟನೆ ಯತ್ನ: ಸಿದ್ದರಾಮಯ್ಯ, ಗುಂಡೂರಾವ್ ಪೊಲೀಸ್ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2020, 9:47 IST
Last Updated 15 ಫೆಬ್ರುವರಿ 2020, 9:47 IST
ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಗುಂಡೂರಾವ್
ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಸಿದ್ದರಾಮಯ್ಯ ಮತ್ತು ಗುಂಡೂರಾವ್   

ಬೆಂಗಳೂರು:ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿಪ್ರತಿಭಟನೆ ನಡೆಸುತ್ತಿದ್ದ‌ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ರಿಜ್ವಾನ್ ಅರ್ಷದ್ ಅವರನ್ನು ಶನಿವಾರ ಮಧ್ಯಾಹ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರತಿಭಟನಾನಿರತರು ಮುಖ್ಯಮಂತ್ರಿಗಳ ಕಚೇರಿಯತ್ತ ತೆರಳಲು ಮುಂದಾದಾಗ ರೇಸ್‌ಕೋರ್ಸ್ ರಸ್ತೆಯಲ್ಲಿ ಅವರನ್ನು ವಶಕ್ಕೆ ಪಡೆಯಲಾಯಿತು.

ಬೀದರ್‌ನ ಶಾಹೀನ್ ಶಾಲೆವಾರ್ಷಿಕೋತ್ಸವದಲ್ಲಿ ವಿವಾದಾತ್ಮಕ ನಾಟಕ ಆಡಿಸಿದ್ದ ವಿಚಾರವಾಗಿದೇಶದ್ರೋಹ ಪ್ರಕರಣ ದಾಖಲಿಸಲಾಗಿತ್ತು.ದೇಶದ್ರೋಹ ಆರೋಪದಡಿವಿದ್ಯಾರ್ಥಿಗಳನ್ನು ಇತ್ತೀಚೆಗೆ ವಿಚಾರಣೆಗೆ ಒಳಪಡಿಸಲಾಗಿತ್ತು. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿದೆ ಎಂದುಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ADVERTISEMENT

‘ಬಿಜೆಪಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದವರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಿ ಅವರ ದನಿಯನ್ನು ಹತ್ತಿಕ್ಕಲಾಗುತ್ತಿದೆ’ ಎಂದು ಗುಂಡೂರಾವ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.