ADVERTISEMENT

ರಾಹುಲ್‌ ಗಾಂಧಿ ನಿರ್ಧಾರದ ಮೇಲೆ ಡಿಕೆಶಿ ಭವಿಷ್ಯ: ಆಗುತ್ತಾ ಅಧಿಕಾರ ಹಸ್ತಾಂತರ?

ಪ್ರಜಾವಾಣಿ ವಿಶೇಷ
Published 12 ಫೆಬ್ರುವರಿ 2026, 15:38 IST
Last Updated 12 ಫೆಬ್ರುವರಿ 2026, 15:38 IST

ಆಡಳಿತರೂಢ ಕಾಂಗ್ರೆಸ್‌ ಪಕ್ಷದಲ್ಲಿ ನಾಯಕತ್ವದ ಹಗ್ಗಜಗ್ಗಾಟ ಆರು ತಿಂಗಳಿನಿಂದ ಜೋರಾಗಿ ನಡೆಯುತ್ತಲೇ ಇದೆ. ಎರಡೂವರೆ ವರ್ಷದ ಬಳಿಕ ಅಧಿಕಾರ ಹಸ್ತಾಂತರದ ಬಗ್ಗೆ ಒಪ್ಪಂದವಾಗಿತ್ತು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಪ್ರತಿಪಾದಿಸಿದ್ದರೆ, ಯಾವುದೇ ಒಪ್ಪಂದವೂ ಆಗಿಲ್ಲ, ನಾನೇ ಅಧಿಕಾರ ಪೂರ್ಣಗೊಳಿಸುವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಟ್ಟಿ ಧ್ವನಿಯಲ್ಲಿ ಹೇಳುತ್ತಲೇ ಇದ್ದಾರೆ. ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲೇಬೇಕೆಂಬ ಛಲಕ್ಕೆ ಬಿದ್ದಿರುವ ಶಿವಕುಮಾರ್‌, ಶತಾಯಗತಾಯ ಯತ್ನ ನಡೆಸಿದ್ದಾರೆ. ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ತೆಗೆದುಕೊಳ್ಳುವ ತೀರ್ಮಾನದ ಮೇಲೆ ಎಲ್ಲವೂ ನಿರ್ಧಾರವಾಗಲಿದೆ. ಈ ಎಲ್ಲ ಬೆಳವಣಿಗೆಗಳ ಕುರಿತು ವಿಶ್ಲೇಷಣಾತ್ಮಕ ಚರ್ಚೆ ಇಲ್ಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.