ADVERTISEMENT

ಬೊಮ್ಮಾಯಿ ದೆಹಲಿ ಟೂರಿಸ್ಟ್‌, ಸಂಪುಟ ಅಲ್ಲ ಸಂಕಟ ವಿಸ್ತರಣೆ ಆಗಲಿದೆ: ಕಾಂಗ್ರೆಸ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ನವೆಂಬರ್ 2022, 10:35 IST
Last Updated 29 ನವೆಂಬರ್ 2022, 10:35 IST
ಬಸವರಾಜ ಬೊಮ್ಮಾಯಿ (ಕಡತ ಚಿತ್ರ)
ಬಸವರಾಜ ಬೊಮ್ಮಾಯಿ (ಕಡತ ಚಿತ್ರ)   

ಬೆಂಗಳೂರು: ಬೆಳಗಾವಿ ಗಡಿ ವಿವಾದ ಹಾಗೂ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಾಂಗ್ರೆಸ್‌ ‘ ಎಂದು ದೆಹಲಿ ಟೂರಿಸ್ಟ್‌‘ ಛೇಡಿಸಿದೆ.‌

ಅಲ್ಲದೇ ಅವರ ಈ ಭೇಟಿಯಿಂದಾಗಿ ಸಂ‍ಪುಟ ವಿಸ್ತರಣೆ ಆಗುವುದಿಲ್ಲ. ಅವರ ಸಂಕಟ ವಿಸ್ತರಣೆ ಆಗಲಿದೆ. ಈ ಪ್ರವಾಸದಿಂದ ನಯಾ ‍ಪೈಸೆಯ ಉಪಕಾರ ಇಲ್ಲ ಎಂದು ಕಾಂಗ್ರೆಸ್‌ ಕುಹಕವಾಡಿದೆ.

ಮುಖ್ಯಮಂತ್ರಿಗಳ ದೆಹಲಿ ಪ್ರವಾಸದ ಬಗ್ಗೆ ಟ್ವೀಟ್‌ ಮಾಡಿರುವ ಕಾಂಗ್ರೆಸ್‌‘ ದೆಹಲಿ ಟೂರಿಸ್ಟ್ ಬಸವರಾಜ ಬೊಮ್ಮಾಯಿ ಅವರನ್ನು ಹೈಕಮಾಂಡ್ ನಾಯಕರು ಭೇಟಿ ಮಾಡಲು ಸತಾಯಿಸುತ್ತಿರುವುದು ನೋಡಿ ಆಯ್ಯೋ ಪಾಪ ಎನಿಸುತ್ತಿದೆ. ಇದುವರೆಗೂ 12 ಬಾರಿ ದೆಹಲಿ ಭೇಟಿ ಮಾಡಿದರೂ ರಾಜ್ಯಕ್ಕೆ ನಯಾಪೈಸೆ ಪ್ರಯೋಜನವಾಗಿಲ್ಲ, ಈಗಲೂ ಆಗುವುದಿಲ್ಲ. ಬೊಮ್ಮಾಯಿಯವರ ಸಂಕಟ ವಿಸ್ತರಣೆಯಾಗುತ್ತಿದೆಯೇ ಹೊರತು ಸಂಪುಟ ವಿಸ್ತರಣೆಯಲ್ಲ‘ ಎಂದು ಕಾಂಗ್ರೆಸ್‌ ಕುಹಕವಾಡಿದೆ.

ADVERTISEMENT

‘ದೆಹಲಿಯಲ್ಲಿ ಬಿಜೆಪಿ ಅಧ್ಯಕ್ಷ ನಡ್ಡಾ ಭೇಟಿ ಮಾಡುತ್ತೇನೆ ಎಂದಿದ್ದ ಬಸವರಾಜ ಬೊಮ್ಮಾಯಿಅವರಿಗೆ ನಡ್ಡಾ ಅಪಾಯಿಂಟ್ಮೆಂಟ್ ಕೊಡಲು ಸತಾಯಿಸುತ್ತಿರುವುದೇಕೆ? ರಾಜ್ಯದ ಸಿಎಂ ಬೊಮ್ಮಾಯಿಯವರನ್ನ ಕಂಡರೆ ಹೈಕಮಾಂಡಿಗೆ ಅಷ್ಟೊಂದು ತಾತ್ಸಾರವೇ? ಬೊಮ್ಮಾಯಿಯವರು ಅಷ್ಟು ಅಸಮರ್ಥರೆ? ಬೊಮ್ಮಾಯಿಯವರೆಂದರೆ ಬಿಜೆಪಿಯಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆಯೇ?‘ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.