ADVERTISEMENT

ಜೆಡಿಎಸ್‌–ಬಿಜೆಪಿ ಮೈತ್ರಿ: ಆತ್ಮವಂಚನೆಯ ಕೆಲಸ ಎಂದ ಕಾಂಗ್ರೆಸ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಸೆಪ್ಟೆಂಬರ್ 2023, 13:01 IST
Last Updated 21 ಸೆಪ್ಟೆಂಬರ್ 2023, 13:01 IST
<div class="paragraphs"><p>ಕಾಂಗ್ರೆಸ್‌ </p></div>

ಕಾಂಗ್ರೆಸ್‌

   

(ಕಡತ ಚಿತ್ರ)

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್‌ ಹಾಗೂ ಬಿಜೆಪಿಯ ಮೈತ್ರಿಯ ಬಗ್ಗೆ ಕಾಂಗ್ರೆಸ್‌ ಟೀಕೆ ಮಾಡಿದೆ.

ADVERTISEMENT

ಜೆಡಿಎಸ್‌ ನಾಯಕ ಕುಮಾರಸ್ವಾಮಿ ವಿರುದ್ಧ ಟೀಕಾ ಪ್ರಹಾರ ಮಾಡಿರುವ ಕಾಂಗ್ರೆಸ್‌, ಇಂತಹ ಆತ್ಮವಂಚನೆಯ ಕೆಲಸಕ್ಕಿಂತ ಪಕ್ಷ ವಿಸರ್ಜಿಸುವುದೇ ಉತ್ತಮ ಎಂದು ಕಿಡಿ ಕಾರಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಕಾಂಗ್ರೆಸ್‌ ಘಟಕವು, ‘ಬಿಜೆಪಿ ನಾಯಕರ ಭೇಟಿಗೆ ಸಿಗದ ಹೈಕಮಾಂಡ್ ನಾಯಕರು ಕುಮಾರಸ್ವಾಮಿಯವರಿಗೆ ಸುಲಭಕ್ಕೆ ಸಿಗುತ್ತಿರುವುದು ಬಿಜೆಪಿ ನಾಯಕರ ರಾಜಕೀಯ ದಾರಿದ್ರ್ಯಕ್ಕೆ ಹಿಡಿದ ಕನ್ನಡಿ’ ಎಂದು ಕುಹಕವಾಡಿದೆ.

‘ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ನಾವು ಮೊದಲೇ ಹೇಳಿದ್ದೆವು, ನಾವು ಹೇಳಿದಂತೆಯೇ ಈಗ ಸಾಬೀತು ಮಾಡುತ್ತಿದ್ದಾರೆ’ ಎಂದು ಕಾಂಗ್ರೆಸ್‌ ಹೇಳಿದೆ.

‘ಬಿಜೆಪಿ ಜೊತೆ ಹೋಗುವ ದಾರಿದ್ರ್ಯ ಬಂದಿಲ್ಲ ಎಂದಿದ್ದ ಜೆಡಿಎಸ್, ಈಗ ಅಮಿತ್ ಶಾ ಮನೆಯ ಬಾಗಿಲು ಬಡಿಯುತ್ತಿದ್ದಾರೆ. ಇಂತಹ ಆತ್ಮವಂಚನೆಯ ಕೆಲಸಕ್ಕಿಂತ ಕುಮಾರಸ್ವಾಮಿಯವರೇ ಹೇಳಿದ್ದಂತೆ ಪಕ್ಷವನ್ನು ವಿಸರ್ಜಿಸಿವುದೇ ಉತ್ತಮ’ ಎಂದು ಕಾಂಗ್ರೆಸ್‌ ಕೋಪ ವ್ಯಕ್ತಪಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.