ADVERTISEMENT

Covid-19 Karnataka Update: 7,051 ಹೊಸ ಪ್ರಕರಣ, 7,064 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 15:39 IST
Last Updated 5 ಅಕ್ಟೋಬರ್ 2020, 15:39 IST
ಮಾಸ್ಕ್‌ಗಳ ಮಾರಾಟ–ಸಂಗ್ರಹ ಚಿತ್ರ
ಮಾಸ್ಕ್‌ಗಳ ಮಾರಾಟ–ಸಂಗ್ರಹ ಚಿತ್ರ   
""

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 7,051 ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 84 ಮಂದಿ ಸಾವಿಗೀಡಾಗಿದ್ದಾರೆ.

ಸೋಮವಾರ ಒಟ್ಟು 7,064 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಈವರೆಗೂ 5,22,846 ಮಂದಿ ಚೇತರಿಸಿಕೊಂಡಿದ್ದಾರೆ. 1,15,477 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಒಟ್ಟು ಪ್ರಕರಣಗಳ ಸಂಖ್ಯೆ 6,47,712 ತಲುಪಿದ್ದು, ಈ ಪೈಕಿ 9,370 ಮಂದಿ ಸಾವಿಗೀಡಾಗಿದ್ದಾರೆ.

ADVERTISEMENT

ಬೆಂಗಳೂರಿನಲ್ಲಿ 2,189 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 2,972 ಮಂದಿ ಗುಣಮುಖರಾಗಿದ್ದಾರೆ ಹಾಗೂ 34 ಮಂದಿ ಮೃತಪಟ್ಟಿದ್ದಾರೆ.

ಮೈಸೂರಿನಲ್ಲಿ 910 ಪ್ರಕರಣಗಳು, ಹಾಸನದಲ್ಲಿ 537, ತುಮಕೂರಿನಲ್ಲಿ 294, ಚಿತ್ರದುರ್ಗದಲ್ಲಿ 276 ಹಾಗೂ ದಕ್ಷಿಣ ಕನ್ನಡದಲ್ಲಿ 245 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.