ಬೆಂಗಳೂರು: ರಾಜ್ಯದಾದ್ಯಂತ ಇಂದು ಒಂದೇ ದಿನ 10,107 ಮಂದಿ ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ರಾಜ್ಯದಲ್ಲಿಕಳೆದ 24 ಗಂಟೆಗಳ ಅವಧಿಯಲ್ಲಿ 9,523 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 75 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 7,10,309ಕ್ಕೆ ಏರಿಕೆಯಾಗಿದೆ. ಈವರೆಗೆ 9,966 ಮಂದಿ ಸಾವಿಗೀಡಾಗಿದ್ದಾರೆ.
ಇದುವರೆಗೆ 5,80,054 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 1,20,270 ಸಕ್ರಿಯ ಪ್ರಕರಣಗಳಿವೆ. ಆ ಪೈಕಿ 904 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಇಂದು ಹೊಸದಾಗಿ 4,623 ಪ್ರಕರಣಗಳು ಪತ್ತೆಯಾಗಿದ್ದು, 24 ಮಂದಿ ಮೃತಪಟ್ಟಿದ್ದಾರೆ. ಮೈಸೂರಿನಲ್ಲಿ 541, ಹಾಸನ 463, ಚಿತ್ರದುರ್ಗ 378, ಬೆಳಗಾವಿ 331, ತುಮಕೂರು 285, ಮಂಡ್ಯ 267, ದಕ್ಷಿಣ ಕನ್ನಡ 265, ಬಳ್ಳಾರಿ ಜಿಲ್ಲೆಯಲ್ಲಿ 226 ಪ್ರಕರಣಗಳು ಪತ್ತೆಯಾಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.