
ವಿಧಾನಸೌಧ
ಬೆಂಗಳೂರು: ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 54 ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸಚಿವ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
ಆಯಾ ಇಲಾಖೆಗೆ ಸಂಬಂಧಿಸಿದಂತೆ ಕಾಯ್ದೆ ಮತ್ತು ನಿಯಮಗಳ ರೀತಿ ತಕ್ಷಣದಿಂದ ಅಧ್ಯಕ್ಷರು ಕಾರ್ಯನಿರ್ವಹಿಸುವಂತೆ ಸೂಚಿಸಿ, ರಾಜ್ಯ ಸ್ಥಾನಮಾನಗಳನ್ನು ಆಡಳಿತ ಇಲಾಖೆಗಳು ಒದಗಿಸಬೇಕೆಂದು ಆದೇಶದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ತಿಳಿಸಿದೆ.
ಗೇರು ಅಭಿವೃದ್ಧಿ ನಿಗಮ, ಮೃಗಾಲಯ ಪ್ರಾಧಿಕಾರ, ಜೀವ ವೈವಿಧ್ಯ ಮಂಡಳಿ, ರಾಜ್ಯ ಹಜ್ ಸಮಿತಿ, ಕ್ರಿಶ್ಚಿಯನ್ ಅಭಿವೃದ್ಧಿ ನಿಗಮ, ಒಕ್ಕಲಿಗ ಅಭಿವೃದ್ಧಿ ನಿಗಮ, ಮರಾಠ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ ಹೀಗೆ ವಿವಿಧ ನಿಗಮಗಳು, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರಿಗೆ ಮುಂದಿನ ಆದೇಶದವರೆಗೆ ಈ ಸೌಲಭ್ಯ ಸಿಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.