ADVERTISEMENT

Covid-19 Karnataka Update: ಒಂದೇ ದಿನದಲ್ಲಿ 299 ಹೊಸ ಪ್ರಕರಣ, ರಾಜ್ಯ ತಲ್ಲಣ

​ಪ್ರಜಾವಾಣಿ ವಾರ್ತೆ
Published 31 ಮೇ 2020, 13:09 IST
Last Updated 31 ಮೇ 2020, 13:09 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮೇ 30ರ ಸಂಜೆ 5 ಗಂಟೆಯಿಂದ ಮೇ 31ರ ಸಂಜೆ 5 ಗಂಟೆವರೆಗೆ 299 ಹೊಸ ಕೋವಿಡ್-19ಪ್ರಕರಣಗಳು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3221ಕ್ಕೆ ತಲುಪಿದ್ದು, ಕೊರೊನಾ ಸೋಂಕಿನಿಂದ ಈವರೆಗೂ 51 ಮಂದಿ ಸಾವಿಗೀಡಾಗಿದ್ದಾರೆ.

997 ಜನರು ಸೋಂಕಿನಿಂದ ಗುಣಮುಖರಾಗಿದ್ದು, 1,874 ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿದಿದೆ.

ADVERTISEMENT

15 ಕೊರೊನಾ ಪೀಡಿತರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ.

ರಾಯಚೂರಿನಲ್ಲಿ 83, ಯಾದಗಿರಿಯಲ್ಲಿ 44, ಬೀದರ್‌ನಲ್ಲಿ 33, ಬೆಂಗಳೂರು ನಗರದಲ್ಲಿ 21, ದಕ್ಷಿಣ ಕನ್ನಡದಲ್ಲಿ 14, ವಿಜಯಪುರದಲ್ಲಿ 26, ಬೆಳಗಾವಿ ಮತ್ತು ಮಂಡ್ಯದಲ್ಲಿ ತಲಾ 13 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.