ADVERTISEMENT

Karnataka Covid-19 Update: ರಾಜ್ಯದಲ್ಲಿ 830 ಹೊಸ ಪ್ರಕರಣಗಳು

​ಪ್ರಜಾವಾಣಿ ವಾರ್ತೆ
Published 14 ಡಿಸೆಂಬರ್ 2020, 13:05 IST
Last Updated 14 ಡಿಸೆಂಬರ್ 2020, 13:05 IST
   
""

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 830 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇ ಅವಧಿಯಲ್ಲಿ 10 ಮಂದಿ ಸಾವಿಗೀಡಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇದರೊಂದಿಗೆ ರಾಜ್ಯದಲ್ಲಿ ಒಟ್ಟು 9,02,240 ಪ್ರಕರಣಗಳು ವರದಿಯಾಗಿದ್ದು, ಸಾವಿನ ಸಂಖ್ಯೆ 11,954ಕ್ಕೆ ತಲುಪಿದೆ. ಸೋಮವಾರ ಗುಣಮುಖರಾದ 2,164 ಮಂದಿಯೂ ಸೇರಿದಂತೆ ಇದುವರೆಗೆ ಒಟ್ಟು 8,74,202 ಸೋಂಕಿತರು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಸದ್ಯ 16,065 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ 254 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ 369 ಹೊಸ ಪ್ರಕರಣಗಳು ವರದಿಯಾಗಿವೆ. ಉಳಿದಂತೆ, ಮೈಸೂರಿನಲ್ಲಿ 56, ಬಳ್ಳಾರಿಯಲ್ಲಿ 17, ಉಡುಪಿಯಲ್ಲಿ 36, ಚಿಕ್ಕಬಳ್ಳಾಪುರದಲ್ಲಿ 31, ಕೊಡಗಿನಲ್ಲಿ 34 ಪ್ರಕರಣಗಳು ದಾಖಲಾಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.