ADVERTISEMENT

Karnataka Covid-19 Update: ಬೆಂಗಳೂರಲ್ಲಿ 197 ಮಂದಿಗೆ ಕೊರೊನಾ, 2 ಸಾವು

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2021, 15:20 IST
Last Updated 16 ಡಿಸೆಂಬರ್ 2021, 15:20 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಗುರುವಾರ 303 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ 197 ಮಂದಿಗೆ ಕೋವಿಡ್‌ ಸೋಂಕು ತಗುಲಿರುವುದು ದೃಢವಾಗಿದೆ. ಉಳಿದ ಬೇರೆ ಯಾವುದೇ ಜಿಲ್ಲೆಯಲ್ಲಿ ದೈನಂದಿನ ಕೋವಿಡ್‌ ಪ್ರಕರಣಗಳ ಸಂಖ್ಯೆ 25ನ್ನು ದಾಟಿಲ್ಲ.

ಕೋವಿಡ್‌ ಸೋಂಕಿನ ರೂಪಂತರ ಓಮೈಕ್ರಾನ್‌ನ ಹೊಸ 5 ಪ್ರಕರಣಗಳು ರಾಜ್ಯದಲ್ಲಿ ಪತ್ತೆಯಾಗಿವೆ.

ಕೋವಿಡ್‌ ಸೋಂಕಿನಿಂದ 322 ಮಂದಿ ಗುಣಮುಖರಾಗಿದ್ದು, ಒಟ್ಟು ಸಕ್ರಿಯ ಕೋವಿಡ್‌ ಪ್ರಕರಣಗಳ ಸಂಖ್ಯೆ 7,158ಕ್ಕೆ ಇಳಿಕೆಯಾಗಿದೆ. ಇಬ್ಬರು ಕೋವಿಡ್‌ ಕಾರಣದಿಂದ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವರದಿಯಲ್ಲಿ ತಿಳಿಸಿದೆ.

ADVERTISEMENT

ಇದುವರೆಗೆ ಒಟ್ಟು 30,01,554 ಮಂದಿಗೆ ಕೋವಿಡ್‌ ಸೋಂಕು ತಗುಲಿದೆ. ಈ ಪೈಕಿ ಕೋವಿಡ್‌ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 29.56 ಲಕ್ಷ ದಾಟಿದೆ.

ಬೆಂಗಳೂರು ನಗರದಲ್ಲಿ ಇಬ್ಬರು ಕೋವಿಡ್‌ ಕಾರಣದಿಂದ ಮೃತರಾಗಿದ್ದಾರೆ. ಬೇರೆ ಯಾವ ಜಿಲ್ಲೆಯಲ್ಲೂ ಸಾವಿನ ವರದಿಯಾಗಿಲ್ಲ. ಮೈಸೂರಲ್ಲಿ 21, ದಕ್ಷಿಣ ಕನ್ನಡದಲ್ಲಿ 15, ಕೊಡಗು ಜಿಲ್ಲೆಯಲ್ಲಿ 13 ಕೋವಿಡ್‌ ದೃಢ ಪ್ರಕರಣಗಳು ವರದಿಯಾಗಿವೆ. ಇನ್ನುಳಿದಂತೆ ಯಾವುದೇ ಜಿಲ್ಲೆಯಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆ 10ನ್ನು ದಾಟಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.