ADVERTISEMENT

Karnataka Covid-19 Update: 826 ಹೊಸ ಪ್ರಕರಣ ಪತ್ತೆ, ಬೆಂಗಳೂರಲ್ಲೇ 746 ಕೇಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 3 ಜುಲೈ 2022, 16:05 IST
Last Updated 3 ಜುಲೈ 2022, 16:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು:ರಾಜ್ಯದಲ್ಲಿ ಕೋವಿಡ್–19 ದೃಢಪಟ್ಟ 826 ಹೊಸ ಪ್ರಕರಣಗಳು ಭಾನುವಾರ ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.‌

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ39,72,285ಕ್ಕೆ ಏರಿಕೆಯಾಗಿದೆ. ಆ ಪೈಕಿ40,077 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ39,25,500 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ6,666 ಸಕ್ರಿಯ ಪ್ರಕರಣಗಳಿವೆ.

ದೈನಂದಿನ ಕೋವಿಡ್‌ ದೃಢ ಪ್ರಮಾಣಶೇ3.25 ರಷ್ಟಿದ್ದು, ವಾರದ ದರ ಶೇ4.08 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.‌

ADVERTISEMENT

ರಾಜಧಾನಿ ಬೆಂಗಳೂರು ಒಂದರಲ್ಲೇ746 ಪ್ರಕರಣಗಳು ಪತ್ತೆಯಾಗಿವೆ. ಉಳಿದಂತೆ ದಕ್ಷಿಣ ಕನ್ನಡ (12) ಹಾಗೂ ಮೈಸೂರಿನಲ್ಲಿ (17) ಮಾತ್ರ ಹತ್ತಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಹನ್ನೊಂದು ಜಿಲ್ಲೆಗಳಲ್ಲಿ ಒಂದೂ ಪ್ರಕರಣ ಬೆಳಕಿಗೆ ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.