ADVERTISEMENT

Karnataka Covid-19 Update: ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಪ್ರಕರಣ ಹೆಚ್ಚಳ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಡಿಸೆಂಬರ್ 2021, 16:37 IST
Last Updated 21 ಡಿಸೆಂಬರ್ 2021, 16:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 295 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.ವೈರಾಣುವಿನ ವಂಶವಾಹಿ ಸಂರಚನಾ ವಿಶ್ಲೇಷಣೆಯಿಂದ (ಜೀನೋಮ್‌ ಸೀಕ್ವೆನ್ಸಿಂಗ್‌) ಕೊರೊನಾ ವೈರಾಣುವಿನ ರೂಪಾಂತರಿ ಡೆಲ್ಟಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ದೃಢಪಟ್ಟಿವೆ.

479ಡೆಲ್ಟಾ (ಬಿ.1617.2) ಪ್ರಕರಣಗಳು ಪರೀಕ್ಷೆಯಿಂದ ಖಚಿತಪಟ್ಟಿವೆ. ಈ ಮಾದರಿಯ ಪ್ರಕರಣಗಳ ಒಟ್ಟು ಸಂಖ್ಯೆ2,569ಕ್ಕೆ ಏರಿಕೆಯಾಗಿದೆ. ಡೆಲ್ಟಾ ಉಪತಳಿಯ 391ಪ್ರಕರಣಗಳು ದೃಢಪಟ್ಟಿವೆ. ಈ ತಳಿಯ ಕೋವಿಡ್ ಪ್ರಕರಣಗಳ ಸಂಖ್ಯೆ949ಕ್ಕೆ ಹೆಚ್ಚಳವಾಗಿದೆ. ರಾಜ್ಯದಲ್ಲಿ ಈವರೆಗೆ 19 ಓಮೈಕ್ರಾನ್ ಪ್ರಕರಣಗಳು ವರದಿಯಾಗಿವೆ.

ಒಂದು ದಿನದ ಅವಧಿಯಲ್ಲಿ 75 ಸಾವಿರ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.39ರಷ್ಟಿದೆ. ಎರಡು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 15 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ ಸೇರಿದಂತೆ 12 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ.

ADVERTISEMENT

ಬೆಂಗಳೂರು ನಗರದಲ್ಲಿ 204 ಮಂದಿಕೋವಿಡ್ಪೀಡಿತರಾಗಿದ್ದಾರೆ. ‌ಉತ್ತರ ಕನ್ನಡದಲ್ಲಿ 30 ಹಾಗೂ ಮೈಸೂರಿನಲ್ಲಿ 10 ಪ್ರಕರಣಗಳುವರದಿಯಾಗಿವೆ.ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 10ಕ್ಕಿಂತ ಕಡಿಮೆ ಇವೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 30.02 ಲಕ್ಷಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ 290 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಸಂಖ್ಯೆ 29.57 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,074ಕ್ಕೆ ಇಳಿಕೆಯಾಗಿದೆ.ಬೆಂಗಳೂರಿನಲ್ಲಿ 5,691 ಸೋಂಕಿತರಿದ್ದಾರೆ.ಯಾದಗಿರಿ ಹಾಗೂ ಬೀದರ್‌ನಲ್ಲಿ ಸಕ್ರಿಯ ಪ್ರಕರಣಗಳಿಲ್ಲ. ಹಾವೇರಿ, ಗದಗ ಸೇರಿದಂತೆ 8 ಜಿಲ್ಲೆಗಳಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.

ಕೋವಿಡ್ಪೀಡಿತರಲ್ಲಿ ಕೊಡಗಿನಲ್ಲಿ ಇಬ್ಬರು, ಚಿಕ್ಕಬಳ್ಳಾಪುರ, ಹಾಸನ ಹಾಗೂ ಕಲಬುರಗಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಮರಣ ಪ್ರಕರಣ ವರದಿಯಾಗಿಲ್ಲ.ಮರಣ ಪ್ರಮಾಣ ದರವು ಶೇ 1.69 ರಷ್ಟು ಇದೆ. ಈವರೆಗೆಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,295ಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.