ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ ನಾಲ್ಕು ದಿನಗಳಿಂದ ಏರುಗತಿ ಪಡೆದುಕೊಂಡಿದ್ದು, ಸದ್ಯ 6,831 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಭಾನುವಾರ 77 ಸಾವಿರ ಮಾದರಿಗಳನ್ನು ಪರೀಕ್ಷೆ ಮಾಡಲಾಗಿದೆ. 315 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಸೋಂಕು ದೃಢ ಪ್ರಮಾಣ ಶೇ 0.63 ರಷ್ಟು ದೃಢಪಟ್ಟಿದೆ. ಆರು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 12 ಜಿಲ್ಲೆಗಳಲ್ಲಿ ಒಂದಂಕಿಯಲ್ಲಿದೆ. ಬಾಗಲಕೋಟೆ, ಬೆಳಗಾವಿ ಸೇರಿದಂತೆ 11 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ.
ಬೆಂಗಳೂರು ನಗರದ (152), ಧಾರವಾಡ (49) ಹಾಗೂ ಮೈಸೂರಿನಲ್ಲಿ (26) ಅಧಿಕ ಪ್ರಕರಣಗಳು ಪತ್ತೆಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 20ಕ್ಕಿಂತ ಕಡಿಮೆಯಿದೆ. ಈವರೆಗೆ ಸೋಂಕಿತರಾದವರ ಒಟ್ಟು ಸಂಖ್ಯೆ 29.95 ಲಕ್ಷ ದಾಟಿದೆ.
ಬೆಂಗಳೂರಿನಲ್ಲಿ 5,287 ಸಕ್ರಿಯ ಪ್ರಕರಣಗಳಿವೆ. ಯಾದಗಿರಿ, ಬೀದರ್ ಸೇರಿದಂತೆ 10 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ 10ಕ್ಕಿಂತ ಕಡಿಮೆಯಿದೆ. ಸೋಂಕಿತರಲ್ಲಿ 236 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.50 ಲಕ್ಷ ದಾಟಿದೆ.
ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಮರಣ ಪ್ರಮಾಣ ದರವು ಶೇ 0.63 ರಷ್ಟು ಇದೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,198ಕ್ಕೆ ಏರಿಕೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.