ADVERTISEMENT

Covid-19 Karnataka Update| 90 ಸಾವಿರ ದಾಟಿದ ಸೋಂಕಿತರ ಸಂಖ್ಯೆ

​ಪ್ರಜಾವಾಣಿ ವಾರ್ತೆ
Published 25 ಜುಲೈ 2020, 18:05 IST
Last Updated 25 ಜುಲೈ 2020, 18:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು:ರಾಜ್ಯದಲ್ಲಿ ಮತ್ತೆ 5,072 ಮಂದಿ ಕೋವಿಡ್ ಪೀಡಿತರಾಗಿರುವುದು ಹಾಗೂ ಸೋಂಕಿತರ ಪೈಕಿ 72 ಮಂದಿ ಮೃತಪಟ್ಟಿರುವುದು ಶನಿವಾರ ದೃಢಪಟ್ಟಿದೆ.

ಕೇವಲ48 ಗಂಟೆಗಳಲ್ಲಿ 10,079 ಮಂದಿಗೆ ಸೋಂಕು ತಗುಲಿರುವುದು ಖಚಿತಪಟ್ಟಿದೆ. ಇದೇ ಅವಧಿಯಲ್ಲಿ 182 ಮಂದಿ ಸಾವಿಗೀಡಾಗಿದ್ದಾರೆ. ಇದರಿಂದಾಗಿ ಒಟ್ಟು ಸೋಂಕಿತರ ಸಂಖ್ಯೆ 90,942ಕ್ಕೆ ಹಾಗೂ ಮೃತಪಟ್ಟವರ ಸಂಖ್ಯೆ 1,796ಕ್ಕೆ ತಲುಪಿದೆ.

ಶನಿವಾರ ಒಂದೇ ದಿನ 11,256 ಮಂದಿಗೆ ಆ್ಯಂಟಿಜೆನ್ ಸೇರಿದಂತೆ ಒಟ್ಟು 32,765 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಸೋಂಕಿತರ ಜತೆಗೆ ಚೇತರಿಸಿಕೊಳ್ಳುವವರ ಸಂಖ್ಯೆ ಕೂಡ ಅಧಿಕವಾಗುತ್ತಿದೆ. ಬೆಂಗಳೂರಿನಲ್ಲಿ 686 ಸೇರಿದಂತೆ ರಾಜ್ಯದಲ್ಲಿ 2,403 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಈವರೆಗೆ ಚೇತರಿಸಿಕೊಂಡವರ ಸಂಖ್ಯೆ 33,750ಕ್ಕೆ ಏರಿಕೆಯಾಗಿದೆ. ಸದ್ಯ 611 ರೋಗಿಗಳಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಪ್ರತಿನಿತ್ಯ ಸೋಂಕಿತರ ಸಂಖ್ಯೆ 2 ಸಾವಿರದ ಗಡಿ ದಾಟುತ್ತಿದೆ. ಮತ್ತೆ 2,036 ಮಂದಿ ಕೋವಿಡ್ ಪೀಡಿತರಾಗಿರುವುದು ದೃಢಪಟ್ಟಿದೆ. ಬೆಳಗಾವಿ (341), ಬಳ್ಳಾರಿ (222), ದಕ್ಷಿಣ ಕನ್ನಡ (218), ಮೈಸೂರು (187), ಕಲಬುರ್ಗಿ (183), ಉಡುಪಿ (182), ವಿಜಯಪುರ (175),ಉತ್ತರ ಕನ್ನಡ (155), ಬೆಂಗಳೂರು ಗ್ರಾಮಾಂತರ (154), ಹಾಸನ (151) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಹೊಸದಾಗಿ ವರದಿಯಾಗಿವೆ.

ಬೆಂಗಳೂರು (29), ದಕ್ಷಿಣ ಕನ್ನಡ (8), ಮೈಸೂರು (8), ಬೆಳಗಾವಿ (5) ಜಿಲ್ಲೆಯಲ್ಲಿ ಅಧಿಕ ಮರಣ ಪ್ರಕರಣಗಳು ಶನಿವಾರ ದೃಢಪಟ್ಟಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.