ADVERTISEMENT

Karnataka Covid-19 Updates: 405 ಹೊಸ ಪ್ರಕರಣ, 4 ಸಾವು 

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2021, 14:11 IST
Last Updated 24 ಡಿಸೆಂಬರ್ 2021, 14:11 IST
   

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 405 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 267 ಮಂದಿ ಚೇತರಿಸಿಕೊಂಡಿದ್ದಾರೆ. ಇದೇ ಅವಧಿಯಲ್ಲಿ 4 ಮಂದಿ ಕೋವಿಡ್‌ನಿಂದ ಸಾವಿಗೀಡಾಗಿದ್ದಾರೆ.

ಈ ಮೂಲಕ ಕೋವಿಡ್ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 30,03,969ಕ್ಕೆ ಏರಿದ್ದು, ಈವರೆಗೆ 38,305 ಸೋಂಕಿತರು ಅಸುನೀಗಿದ್ಧಾರೆ.

ರಾಜ್ಯದಲ್ಲಿ ಸದ್ಯ 7,251 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 29,58,384 ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ಧಾರೆ.

ADVERTISEMENT

ಕೋವಿಡ್ ದೃಢ ಪ್ರಮಾಣ ಶೇಕಡ 0.35 ರಷ್ಟಿದ್ದು, ಮರಣ ಪ್ರಮಾಣ ಶೇಕಡ 0.98ರಷ್ಟಿದೆ.

ಬೆಂಗಳೂರು ನಗರದಲ್ಲಿ ಇಂದು 254 ಪ್ರಕರಣಗಳು ದೃಢಪಟ್ಟಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ. ದಕ್ಷಿಣ ಕನ್ನಡದಲ್ಲಿ 20 ಮತ್ತು ಉತ್ತರ ಕನ್ನಡದಲ್ಲಿ 32 ಪ್ರಕರಣಗಳು ದಾಖಲಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.