ADVERTISEMENT

ರಾಜ್ಯದಲ್ಲಿ 2 ಕೋಟಿ ಜನರಿಗೆ ಒಂದು ಡೋಸ್‌ ಲಸಿಕೆ ನೀಡಲಾಗಿದೆ: ಸಚಿವ ಸುಧಾಕರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜುಲೈ 2021, 17:43 IST
Last Updated 6 ಜುಲೈ 2021, 17:43 IST
ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್    

ಬೆಂಗಳೂರು: ರಾಜ್ಯದಾದ್ಯಂತ 2 ಕೋಟಿ ಜನರಿಗೆ ಕನಿಷ್ಠ ಒಂದು ಡೋಸ್‌ ಕೋವಿಡ್‌ ಲಸಿಕೆಯನ್ನು ನೀಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ರಾಜ್ಯದಾದ್ಯಂತ 2 ಕೋಟಿ ಜನರಿಗೆ ಕನಿಷ್ಠ ಒಂದು ಡೋಸ್ ಲಸಿಕೆ ನೀಡುವ ಮೂಲಕ ಕರ್ನಾಟಕ ಕೊರೊನಾ ಲಸಿಕೆ ವಿತರಣೆಯಲ್ಲಿ ಮತ್ತೊಂದು ಮೈಲಿಗಲ್ಲು ಸಾಧಿಸಿದೆ’ ಎಂದು ಹೇಳಿದ್ದಾರೆ.

ದೇಶದಲ್ಲಿ ಕೋವಿಡ್‌ ಮೂರನೇ ಅಲೆಯನ್ನು ಎದುರಿಸುವ ಉದ್ದೇಶದಿಂದ ಲಸಿಕಾ ಕಾರ್ಯಕ್ರಮಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮತ್ತಷ್ಟು ವೇಗ ನೀಡಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.