ADVERTISEMENT

Karnataka Covid-19 Update: ರಾಜ್ಯದಲ್ಲಿಂದು 39,047 ಪ್ರಕರಣ, 229 ಸಾವು

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2021, 13:53 IST
Last Updated 28 ಏಪ್ರಿಲ್ 2021, 13:53 IST
ಕೋವಿಡ್ ಪರೀಕ್ಷೆಯ ಪ್ರಯೋಗಾಲಯ ಮಾದರಿ ಸಂಗ್ರಹ ಚಿತ್ರ
ಕೋವಿಡ್ ಪರೀಕ್ಷೆಯ ಪ್ರಯೋಗಾಲಯ ಮಾದರಿ ಸಂಗ್ರಹ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 39,047 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಹೀಗಾಗಿ, ಒಟ್ಟು ಸೋಂಕಿತರ ಸಂಖ್ಯೆ 14,39,822ಕ್ಕೆ ಏರಿದೆ. ರಾಜ್ಯದಲ್ಲಿ ಈಗ 3,28,884 ಸಕ್ರಿಯ ಪ್ರಕರಣಗಳಿವೆ.

ಕೋವಿಡ್ ಪ್ರಕರಣಗಳು ದೃಢಪಡುತ್ತಿರುವ ಶೇಕಡಾವಾರು ಪ್ರಮಾಣ 22.70%ಕ್ಕೆ ಏರಿದೆ. ಇದೇ ಅವಧಿಯಲ್ಲಿ 229 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದು, ಈವರೆಗೆ ಒಟ್ಟು ಮೃತಪಟ್ಟವರ ಸಂಖ್ಯೆ 15,036ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರದಲ್ಲಿ ಒಂದೇ ದಿನ 22,596ಹೊಸಪ್ರಕರಣಗಳುದೃಢಪಟ್ಟಿದ್ದು, ಇದೇ ಅವಧಿಯಲ್ಲಿ 137 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಹೀಗಾಗಿ, ಈವರೆಗೆ ನಗರದಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 6,139ಕ್ಕೆ ಏರಿದೆ. 2,24,152 ಸಕ್ರಿಯ ಪ್ರಕರಣಗಳಿವೆ.

ADVERTISEMENT

ಉಳಿದಂತೆ, ಮೈಸೂರಿನಲ್ಲಿ 1759, ಬಳ್ಳಾರಿಯಲ್ಲಿ 1106, ಹಾಸನದಲ್ಲಿ 1001 ಹೊಸ ಪ್ರಕರಣ ದೃಢಪಟ್ಟಿವೆ.

ರಾಜ್ಯದಲ್ಲಿ 2,192 ಕೋವಿಡ್ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾವಾರು ಕೋವಿಡ್ ವಿವರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.