ADVERTISEMENT

Covid-19 Karnataka Update: 41,664 ಹೊಸ ಪ್ರಕರಣ, 34,425 ಮಂದಿ ಗುಣಮುಖ

​ಪ್ರಜಾವಾಣಿ ವಾರ್ತೆ
Published 15 ಮೇ 2021, 14:09 IST
Last Updated 15 ಮೇ 2021, 14:09 IST
ಕೋವಿಡ್ ಟೆಸ್ಟ್: ಪ್ರಾತಿನಿಧಿಕ ಚಿತ್ರ
ಕೋವಿಡ್ ಟೆಸ್ಟ್: ಪ್ರಾತಿನಿಧಿಕ ಚಿತ್ರ   

ಬೆಂಗಳೂರು: 24 ಗಂಟೆಗಳಲ್ಲಿ ರಾಜ್ಯದಲ್ಲಿ 41,664 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಹೀಗಾಗಿ, ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 21,71,931ಕ್ಕೆ ಏರಿಕೆಯಾಗಿದೆ.

ಒಂದೇ ದಿನ 349 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದು, ಇದುವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಾವಿನ ಸಂಖ್ಯೆ 21,434ಕ್ಕೆ ಜಿಗಿದಿದೆ.

ರಾಜ್ಯದಲ್ಲಿ ಒಂದೇ ದಿನ 34,425 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. ಸದ್ಯ, 60,5494 ಕೋವಿಡ್ ಸಕ್ರಿಯ ಪ್ರಕರಣಗಳಿವೆ.

ADVERTISEMENT

ಎಂದಿನಂತೆ ಬೆಂಗಳೂರು ನಗರದಲ್ಲಿ ಅತಿ ಹೆಚ್ಚು 13,402 ಕೋವಿಡ್ ಪ್ರಕರಣ ದೃಢಪಟ್ಟಿದ್ದು, 94 ಮಂದಿ ಮೃತಪಟ್ಟಿದ್ದಾರೆ.

ಉಳಿದಂತೆ ಜಿಲ್ಲಾವಾರು ಕೋವಿಡ್–19 ಅಂಕಿ ಅಂಶಗಳ ವಿವರ ಇಂತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.